ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಆರಂಭವಾಗಿದ್ದು, ಇಂದು ಸೇರಿದಂತೆ ಮುಂದಿನ ನಾಲ್ಕು ದಿನ ಕರಾವಳಿ ಹಾಗೂ ಹಲವೆಡೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 16 ರಿಂದ 18 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುರುವಾರದಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಮಳೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಮತ್ತಿತರೆ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ನೀವು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದೀರಾ?.. ಹಾಗಾದ್ರೆ ಈ ರೋಗಗಳ ಬಗ್ಗೆ ಎಚ್ಚರವಿರಲಿ!