ETV Bharat / city

ಪ್ರತಿಯೊಬ್ಬರೂ 5 ಗಿಡ ಬೆಳೆಸಿ: ಜನತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಕರೆ - ಮಾಚೋಹಳ್ಳಿಯ ಟ್ರೀ ಪಾರ್ಕ್ ಉದ್ಘಾಟನೆ

ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮಾಚೋಹಳ್ಳಿಯ ಟ್ರೀ ಪಾರ್ಕ್ ಅ​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

c m Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jul 1, 2022, 7:45 PM IST

ಬೆಂಗಳೂರು: ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿ, ಜನರ ಸಹಭಾಗಿತ್ವದಿಂದ ಮಾತ್ರ ಅರಣ್ಯೀಕರಣದ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಮಾಚೋಹಳ್ಳಿ ವೃಕ್ಷೋಧ್ಯಾನ ಕಾರ್ಯಕ್ರಮ ಮತ್ತು ವನಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ಇಂದಿನ ಎಲ್ಲ ಬಡಾವಣೆಗಳಲ್ಲಿ ಉದ್ಯಾನಗಳು, ಗಿಡಮರಗಳಿವೆ. ಬೆಂಗಳೂರು ಉದ್ಯಾನನಗರ ಎಂದು ಕರೆಯಲ್ಪಡುತ್ತದೆ. ಈಗ ನಾಗರಿಕತೆ ಹೆಚ್ಚಾಗಿದ್ದು, ಉದ್ಯಮಗಳು ಹೆಚ್ಚಾಗಿದೆ. ಅರಣ್ಯ ಇಲಾಖೆ ವತಿಯಿಂದ ಬೆಂಗಳೂರಿನ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕೆಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅರಣ್ಯೀಕರಣ ಯೋಜನೆಗಳಿಗೆ 100 ಕೋಟಿ: ಕಳೆದ ವರ್ಷ ವಿಶ್ವದ ತಾಪಮಾನ ಶೇ. 1 ರಷ್ಟು ಹೆಚ್ಚಾಗಿದ್ದು, ಹಿಮಬಂಡೆಗಳು ಕರುಗುತ್ತಿವೆ. ಇದರಿಂದ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚಾಗಿ ಜನರಿಗೆ ತೊಂದರೆಯಾಗುವ ಜೊತೆಗೆ ಪ್ರವಾಹ ಭೀತಿಯೂ ಎದುರಾಗುತ್ತದೆ. ಈ ಸಾಲಿನ ಆಯವ್ಯಯದಲ್ಲಿ ಹಸಿರು ಬಜೆಟ್​ನ್ನು ರೂಪಿಸಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪರಿಸರ ಹಾನಿಯನ್ನು ಸರಿದೂಗಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, ಕ್ರಿಯಾ ಯೋಜನೆ ಸಿದ್ಧವಾಗುತ್ತಿದೆ. ಪ್ರತಿ ವರ್ಷವೂ ಪರಿಸರದ ಹಾನಿಯಿಂದಾಗುವ ಕೊರತೆಯನ್ನು ನೀಗಿಸುವ ಯೋಜನೆಗಳನ್ನು ರೂಪಿಸಲು ಅರಣ್ಯ ಇಲಾಖೆಗೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಗಂಧದ ಮರ ನಿರ್ವಹಣೆಗೆ ನಿಯಮ ಸರಳೀಕರಣ: ಗಂಧದ ಮರಗಳು ಮನೆಯಲ್ಲಿದ್ದರೆ ಅದನ್ನು ನಿಭಾಯಿಸುವುದು ಕಷ್ಟವಾಗಿದ್ದು, ಈ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಸರಳೀಕರಿಸಿ ಗಂಧ ಮರಗಳ ನಿರ್ವಹಣೆಗೆ ಈ ವರ್ಷದ ಆಯವ್ಯಯದಲ್ಲಿ ಅನುಕೂಲ ಕಲ್ಪಿಸಲಾಗಿದೆ. ಕನ್ನಡ ನಾಡನ್ನು ಗಂಧದ ನಾಡು ಎಂಬ ಖ್ಯಾತಿ ಇದೆ. ಗಂಧದ ಉತ್ಪನ್ನಗಳು ವಿದೇಶಗಳಿಗೆ ರಫ್ತಾಗುತ್ತದೆ. ಆದ್ದರಿಂದ ಗಂಧದ ಮರಗಳನ್ನು ಹೆಚ್ಚಾಗಿ ಬೆಳೆಸಿ, ರಕ್ಷಣೆ ನೀಡಲು ಈ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಬೀಜೋತ್ಸವ: ಬೀಜೋತ್ಸವ ಕಾರ್ಯಕ್ರಮವನ್ನು ರೂಪಿಸಿ ಎರಡೂವರೆ ಕೋಟಿ ಬೀಜಗಳನ್ನು ಈ ವರ್ಷ ಬಿತ್ತಲಾಗುತ್ತಿದೆ. ಅರಣ್ಯವೆಂದು ಗುರುತಿಸಲ್ಪಡುವ ಪ್ರದೇಶಗಳಲ್ಲಿ ಬೀಜಗಳನ್ನು ಬಿತ್ತುವ ಹಾಗೂ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಮಾಡಲಾಗುವುದು ಎಂದು ಹೇಳಿದರು.

ಮಕ್ಕಳಿಗೆ ಸಿಎಂ ಕರೆ: ಇಂದು ಶಾಲಾ ಮಕ್ಕಳು, ಹಿರಿಯರಿಗೆ ಸಸಿಗಳನ್ನು ನೀಡಲಾಗಿದೆ. ಹಳೇ ಬೇರು, ಹೊಸ ಚಿಗುರು ಒಂದಾದಾಗ ಮಾತ್ರ ಅರಣ್ಯೀಕರಣ ಯಶಸ್ವಿಯಾಗುತ್ತದೆ. ಮಕ್ಕಳು ನೆಡುವ ಗಿಡಗಳಿಗೆ ಒಂದು ಹೆಸರು ನೀಡಬೇಕು. ನಿಮ್ಮ ಪ್ರೀತಿಪಾತ್ರರ ಹೆಸರನ್ನು ನೀಡಿ, ಆಗ ಆ ಗಿಡದೊಂದಿಗೆ ನಿಮ್ಮ ಬಾಂಧವ್ಯ ಹೆಚ್ಚುತ್ತದೆ ಎಂದರು.

ಹಸಿರು ಭಾರತ ನಿರ್ಮಾಣಕ್ಕೆ ಸಂಕಲ್ಪ: ಸ್ವಚ್ಛ ಭಾರತ ಕರೆಯನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಸ್ವಚ್ಛ ಭಾರತದ ಜೊತೆಗೆ ಹಸಿರು ಭಾರತವನ್ನೂ ನಿರ್ಮಿಸುವ ಪ್ರಯತ್ನ ಎಲ್ಲರೂ ಸಂಕಲ್ಪ ಮಾಡಬೇಕೆಂದು ತಿಳಿಸಿದರು.

ಮಾಚೋಹಳ್ಳಿಯ ಟ್ರೀ ಪಾರ್ಕ್ ಅನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಹೆಚ್ಚಿನ ಸಾರ್ವಜನಿಕರು ಇಲ್ಲಿಗೆ ಬರುವಂತೆ ಪ್ರವಾಸಿ ತಾಣವನ್ನಾಗಿ ಮಾಡಬೇಕು. ಪ್ರತಿಯೊಂದು ಕ್ಷೇತ್ರದಲ್ಲಿ ಕನಿಷ್ಟ ನೂರು ಎಕರೆ ಪ್ರದೇಶದಲ್ಲಿ ಅರಣ್ಯೀಕರಣ ಮಾಡುವ ಕೆಲಸವನ್ನು ಮಾಡಬೇಕು. ರಾಜ್ಯದದಲ್ಲಿರುವ ಶೇ. 21 ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ. 30 ಕ್ಕೇರಿಸಬೇಕು. ಈ ದಿಸೆಯಲ್ಲಿ ಅರಣ್ಯ ಇಲಾಖೆಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಕೂರಲು, ಏಳಲು ಆಗಲ್ಲವೆಂದು ಕುಹಕವಾಡಿದವರಿಗೆ ಉತ್ತರ ಕೊಡುತ್ತೇನೆ: ದೇವೇಗೌಡ ತಿರುಗೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.