ETV Bharat / city

'ಬೆಂಗಳೂರು ಮಿಷನ್ 2022' ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ನೀಡಿದ ಸಲಹೆ-ಸೂಚನೆಗಳಿವು..

author img

By

Published : Nov 7, 2021, 9:14 PM IST

ಬೆಂಗಳೂರು ಸಚಿವರುಗಳನ್ನು ಕರೆಯದೇ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಮ್ಮುಖದಲ್ಲಿ ಬೆಂಗಳೂರು ಮಿಷನ್​ 2022 ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ವಿವಿಧ ಸಲಹೆ ಮತ್ತು ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದರು.

bangalore-mission-2022-progress-review-meeting
ಬೆಂಗಳೂರು ಮಿಷನ್ 2022

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 'ಬೆಂಗಳೂರು ಮಿಷನ್ 2022' ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಬೆಂಗಳೂರು ಸಚಿವರುಗಳನ್ನು ಕರೆಯದೇ ತುರ್ತು ಸಭೆ ನಡೆಸಿದ್ದು ವಿಶೇಷವಾಗಿತ್ತು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಈ ವೇಳೆ, ಬೆಂಗಳೂರು ಅಭಿವೃದ್ಧಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ, ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ, ಉಪನಗರ ರೈಲು ಯೋಜನೆ ಅನುಷ್ಠಾನ, ರಸ್ತೆ ಗುಂಡಿ ಸಂಬಂಧ ಚರ್ಚೆ ನಡೆಸಲಾಯಿತು. ಸಿಎಂ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಸಿಎಂ ನೀಡಿದ ಸಲಹೆ, ಸೂಚನೆ ಏನು?

  1. ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ
  2. ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸಲು ತೀರ್ಮಾನ
  3. ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣ ಗೊಳಿಸಲು ಸೂಚಿಸಿದರು. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ
  4. ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆ. ಇದಕ್ಕೆ 15.40 ಕಿ. ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚನೆ
  5. ಕೆ-ವ್ಯಾಲಿ 100 ವಾಟರ್ ವೇ ಯೋಜನೆಯಡಿ 11 ಕಿ. ಮೀ. ರಾಜಕಾಲುವೆ ಯನ್ನು ಪ್ರೇಕ್ಷಣೀಯ ಸ್ಥಳ ವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ
  6. ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಜನವರಿ ಅಂತ್ಯದ ವೇಳೆಗೆ ಪೂರ್ಣ ಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವು ಗೊಳಿಸಿ ಹಸಿರು ಬೇಲಿ (Green fencing) ಹಾಕುವಂತೆ ಸೂಚನೆ.
  7. ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.