ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಸಿಎಲ್ ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಮಾರ್ಚ್ 26ರಂದು (ಶನಿವಾರ) ರಾತ್ರಿ 9:30 ರಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದೆ.
ಸಿವಿಲ್ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದಲ್ಲಿರುವ ಎಂ.ಜಿ.ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ಎಂ.ಜಿ.ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ, ಕಡೆಗೆ ಕೊನೆಯ ರೈಲು ರಾತ್ರಿ 9 ಗಂಟೆಗೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕಂಗೇರಿ ಕಡೆಗೆ ರಾತ್ರಿ 9:30 ಗಂಟೆಗೆ ಹೊರಡಲಿದೆ. ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ಪುನಾರಂಭಿಸಲಾಗುತ್ತದೆ. ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಶನಿವಾರದಂದು ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ : ನಾಲ್ಕು ವರ್ಷದ ಮಗು ಅನಾಥ !