ಬೆಂಗಳೂರು: ಕೊರೊನಾ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವುದು ಹಾಗೂ ಕೊರೊನೇತರ ಕಾಯಿಲೆಗಳಿಗೆ ಶೀಘ್ರ ಚಿಕಿತ್ಸೆ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆಯ ಕೋವಿಡ್ ಕಾರ್ಯಪಡೆ ಇಂದಿನ ಸಭೆಯಲ್ಲಿ ಸಲಹೆ ನೀಡಿದೆ.
ರಾಜ್ಯದ ನೂತನ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ವಿವಿಧ ಕಾಯಿಲೆ ಎದುರಿಸುತ್ತಿರುವವರಿಗೆ ಕೊರೊನಾ ಇರುವುದು ದೃಢಪಟ್ಟರೆ, ಆದ್ಯತೆ ಮೇರೆಗೆ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳುವ ಕುರಿತು ಟಾಸ್ಕ್ ಫೋರ್ಸ್ ಸದಸ್ಯರು ಚರ್ಚೆ ನಡೆಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ವೈದ್ಯರು, ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆಯೂ ಚಿಂತಿಸಲಾಗಿದೆ. ಇನ್ನು ನಗರದಲ್ಲಿ ಕೊರೊನಾ ಸೋಂಕಿತರ ಐಸಿಯು ಸೇರ್ಪಡೆ ಪ್ರಮಾಣ ಹೆಚ್ಚುತ್ತಿದ್ದು, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ 150 ವೆಂಟಿಲೇಟರ್ಗಳನ್ನು ಅಳವಡಿಸಿಕೊಳ್ಳಲು ಟೆಂಡರ್ ಕರೆಯಲಾಗಿದೆ.