ಬೆಂಗಳೂರು: ಸೋಮವಾರ ಬೆಳಗ್ಗೆಯಿಂದಲೇ ಬೆಂಗಳೂರು ಅನ್ಲಾಕ್ ಆಗಲಿದೆ. ಆದ್ರೆ ರಾಜಧಾನಿಯಲ್ಲಿ ಲಾಕ್ ಡೌನ್ ಸಡಿಲಿಕೆ ಆದ್ರೂ ಫುಲ್ ರಿಲೀಫ್ ಸಿಗೋದಿಲ್ಲ. ಹೌದು, ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ನಗರದಲ್ಲಿ ಜೂನ್ 14ರಿಂದ 21ರವರೆಗೆ ಜಾರಿಯಲ್ಲಿರಲಿದೆ.
ಈ ಬಗ್ಗೆ ಸಿಎಂ ಸೂಚನೆ ನೀಡಿದ್ದು, ನಿತ್ಯ ರಾತ್ರಿ 7 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ರವರೆಗೂ ವೀಕೆಂಡ್ ಕರ್ಫ್ಯೂ ಇರಲಿದೆ. ಲಾಕ್ ಡೌನ್ ಸಡಿಲಿಕೆಯಿಂದ ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
(11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ...ಉಳಿದೆಡೆ ಬೆಳಗ್ಗೆ 6 ರಿಂದ 2 ಗಂಟೆವರಿಗೆ ಅನ್ಲಾಕ್ ಜಾರಿ)
ಯಾವೆಲ್ಲ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ?
- ಲಾಕ್ ಡೌನ್ ಸಡಿಲಿಕೆ ಆದ್ರೂ ಹೋಟೆಲ್ಗಳಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶ ಇದೆ.
- ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರಷ್ಟೇ ಪ್ರಯಾಣಿಸಬಹುದಾಗಿದೆ.
- ಲಾಕ್ ಡೌನ್ ತೆರವಾಗಿದ್ರೂ, ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ಗಳ ಸಂಚಾರ ಇರುವುದಿಲ್ಲ.
- ಪಾರ್ಕ್ಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ವಾಕಿಂಗ್, ಜಾಗಿಂಗ್ಗೆ ಅವಕಾಶ ನೀಡಲಾಗಿದೆ.
- ಮದ್ಯದಂಗಡಿಗಳಲ್ಲಿ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರ ವರೆಗೆ ಅವಕಾಶ ನೀಡಲಾಗಿದೆ.
- ಗಾರ್ಮೆಂಟ್ಸ್ ಶೇ.30 ರಷ್ಟು ಮಾತ್ರ ಸಿಬ್ಬಂದಿಯೊಂದಿಗೆ ತೆರೆಯಬಹುದಾಗಿದೆ.
- ಸಿಮೆಂಟ್, ಸ್ಟೀಲ್ ಅಂಗಡಿಗಳನ್ನು ತೆರೆಯಬಹುದಾಗಿದೆ.
- ಬೀದಿ ಬದಿ ವ್ಯಾಪಾರಿಗಳಿಗೆ ಹಿಂದಿನಂತೆಯೇ ಅವಕಾಶ ಇರಲಿದೆ.
- ಎಲ್ಲಾ ಕಾರ್ಖಾನೆಗಳೂ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ.