ಬೆಂಗಳೂರು: ಆರ್ಎಸ್ಎಸ್ ಬೆಂಬಲಿತ ಭಾರತೀಯ ಕಿಸಾನ್ ಸಂಘ ಭೂ ಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಮಲ್ಲೇಶ್ವರಂ ವೃತ್ತದಿಂದ ಬಿಜೆಪಿ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಜೊತೆ ಸಮಾಲೋಚನೆ ನಡೆಸಿ ತಿದ್ದುಪಡಿ ತರಬೇಕಾಗಿತ್ತು. ಆದರೆ, ಯಾವುದೇ ಸಮಾಲೋಚನೆ ನಡೆಸದೇ ಭೂ ಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಯ್ದೆಯ ಮೂಲಕ ರೈತರ ಜಮೀನನ್ನು ಖಾಸಗೀಕರಣಗೊಳಿಸಲಾಗುತ್ತಿದೆ. ಈ ಬಗ್ಗೆ ಗಟ್ಟಿಯಾಗಿ ದ್ವನಿ ಎತ್ತಲು ಪ್ರತಿಪಕ್ಷಗಳು ವಿಫಲವಾಗಿವೆ. ಇತ್ತ ಸರ್ಕಾರಕ್ಕೆ ಜೀವವಿಲ್ಲ. ರೈತರ ಹೆಸರು ಹೇಳಿ ಮುಖ್ಯಮಂತ್ರಿಗಳಾಗಿದ್ದೀರಿ. ಹೀಗಾಗಿ ರೈತರ ಮಾತಿಗೆ ಮನ್ನಣೆ ನೀಡಿ ಕೂಡಲೇ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯುವಂತೆ ಆಗ್ರಹಿಸಿದರು.