ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೋವಿ ನಿಗಮದ ಎಂಡಿ ಆರ್. ಲೀಲಾವತಿ ನೀಡಿದ ದೂರಿನ ಮೇರೆಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯಕ್ತ ಗಿರೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆರೋಪಿ ಗಿರೀಶ್ ವ್ಯವಸ್ಥಾಪಕ ನಿರ್ದೇಶಕರ ಪ್ರಭಾರ ಸ್ಥಾನ ಕೊಡಬೇಕು ಎಂದು ಎಂಡಿ ಕಚೇರಿಗೆ ಅತಿಕ್ರಮವಾಗಿ ಪ್ರವೇಶಿಸಿ ಅನುಚಿತ ವರ್ತನೆ ತೋರಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೇ, ಮೈ- ಕೈ ಮುಟ್ಟಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾರೆ.
ನನ್ನ ಕಚೇರಿಗೆ ಕುಡಿದು ಬಂದು ಗಲಾಟೆ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಲೀಲಾವತಿ ಅವರು ಆಗ್ರಹಿಸಿದ್ದಾರೆ. ಸದ್ಯ ಬಸವನಗುಡಿ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಓದಿ: ಮರ ಹತ್ತಿ ಕುಳಿತ ಕಾಳಿಂಗ ನೋಡಿ .. ಸುರಕ್ಷಿತವಾಗಿ ಹಿಡಿದು ಕಾಡಿಗೆ ಕಳುಹಿಸಿದ ಸ್ನೇಕ್ ಕಿರಣ್!