ETV Bharat / city

ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ನಡೆಯಬೇಕಿದ್ದ ಪರಿಷತ್​ ಚುನಾವಣೆ ಮುಂದೂಡಿಕೆ

ಕೊರೊನಾ ಹಾಗೂ ಲಾಕ್​ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ಪರಿಷತ್ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿದೆ.

election commission
ಚುನಾವಣಾ ಆಯೋಗ
author img

By

Published : Jun 9, 2020, 8:48 AM IST

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ನಡೆಯುವ ವಿಧಾನ ಷರಿಷತ್​ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಮುಂದೂಡಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದ್ದು, ಕೊರೊನಾ ವೈರಸ್ ಹಾಗೂ ಲಾಕ್​​ಡೌನ್​ನಿಂದಾಗಿ ಚುನಾವಣಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಂಟಿ ಚುನಾವಣಾ ಅಧಿಕಾರಿ ಹೆಚ್​.ಜ್ಞಾನೇಶ್​​​​​​ ಜೂನ್​ 30ಕ್ಕೆ ನಾಲ್ಕು ಕ್ಷೇತ್ರಗಳ ಸದಸ್ಯರ ಅವಧಿ ಮುಗಿಯಲಿದ್ದು, ಕೊರೊನಾ ಹಾಗೂ ಲಾಕ್​ಡೌನ್ ಪರಿಣಾಮದಿಂದಾಗಿ ಇದು ಚುನಾವಣೆಗೆ ಸಕಾಲವಲ್ಲ. ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಚುನಾವಣೆ ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಮುಂದಿನ ದಿನಗಳಲ್ಲಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವುದಾಗಿ ಚುನಾವಣಾಧಿಕಾರಿ ಹೇಳಿದ್ದು, ಸದ್ಯಕ್ಕೆ ರಾಜಕೀಯ ಪಕ್ಷಗಳು ಸ್ವಲ್ಪ ನಿರಾಳವಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.