ಬೆಂಗಳೂರು: ಲಾಲ್‌ಬಾಗ್ ಪಶ್ಚಿಮ ಗೇಟ್ ಬಳಿ ಕಳೆದ ರಾತ್ರಿ (ನೈಟ್ ಕರ್ಫ್ಯೂ ಸಮಯದಲ್ಲೇ) ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ಸುರೇಶ್ ನಾಯ್ಕ್ (36)ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ನಗರದ ಪ್ರಮುಖ ಸ್ಥಳವಾದ ಲಾಲ್‌ಬಾಗ್ ಪಶ್ಚಿಮ ಗೇಟ್ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕ ಬಳಿಕ ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರು ; ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿ ಆತ್ಮಹತ್ಯೆಗೆ ಶರಣು
ಸುರೇಶ್ ನಾಯ್ಕ್ ಕಾರವಾರ ಜಿಲ್ಲೆಯ ಶಿರಸಿ ಮೂಲದವರಾಗಿದ್ದು, ಕೋರಮಂಗಲದ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ಸಂಬಂಧ ಬಸವನಗುಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ ಪತ್ತೆಹಚ್ಚಲು ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರ್ ಪತ್ತೆಗೆ ಮುಂದಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ