ಬೆಂಗಳೂರು: ಸಿಲಿಕಾನ್ ಸಿಟಿಯ ಜೆ.ಜೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ.
ತೌಫಿಕ್ ಪಾಷಾ ಬಂಧಿತ ಆರೋಪಿ. ಜೆ.ಜೆ ನಗರದ ಸರಹದ್ದಿನಲ್ಲಿ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ಗಳನ್ನು ಕಳ್ಳತನ ಮಾಡಿ, ಆರೋಪಿ ಎಸ್ಕೇಪ್ ಆಗುತ್ತಿದ್ದ. ಈ ಕುರಿತು ಜೆ.ಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇನ್ನು ಬಂಧಿತನಿಂದ 4 ಲಕ್ಷ ರೂ. ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈತನ ಮೇಲೆ ಜೆ.ಜೆ ನಗರ , ಕೆ.ಪಿ ಅಗ್ರಹಾರ, ಕಾಟನ್ಪೇಟೆ, ವಿಜಯನಗರ, ಬ್ಯಾಟರಾಯನಪುರ ಸೇರಿದಂತೆ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.