ETV Bharat / city

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ: 12 ದ್ವಿಚಕ್ರವಾಹನಗಳು ಪೊಲೀಸ್ ವಶ

ಬೈಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 6.70 ಲಕ್ಷ ರೂ ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

bike thief arrested in Bengaluru
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ: ಲಕ್ಷಾಂತರ ಮೌಲ್ಯದ 12 ದ್ವಿಚಕ್ರವಾಹನಗಳು ಪೊಲೀಸ್ ವಶ
author img

By

Published : Feb 22, 2022, 12:56 AM IST

ಬೆಂಗಳೂರು: ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪಶ್ಚಿಮ ವಿಭಾಗದ ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 6.70 ಲಕ್ಷ ರೂ ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟಸ್ವಾಮಿ(38) ಬಂಧಿತ ಆರೋಪಿ. ಆರೋಪಿ ಬಂಧನದಿಂದ ಕೆಂಗೇರಿ, ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತು ಜ್ಞಾನಭಾರತಿ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ 12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.

ಆರೋಪಿ ಇತ್ತೀಚೆಗೆ ಕೆಂಗೇರಿ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅದನ್ನು ಗಮನಿಸಿದ್ದ ಗಸ್ತು ಪೊಲೀಸರು ಆನುಮಾನದ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಹಕರ ಹುಡುಕಾಟ: ವಿಚಾರಣೆ ವೇಳೆ ಆರೋಪಿ, ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ ದ್ವಿಚಕ್ರವಾಹನಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ. ಬಳಿಕ ಆಂಧ್ರಪ್ರದೇಶದ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಹಕರನ್ನು ಹುಡುಕಿ 5ರಿಂದ 10 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದನು.

ಇದನ್ನೂ ಓದಿ: ಕೋಲ್ಡ್ ಸ್ಟೋರೇಜ್​​​ನಲ್ಲಿ ಅಕ್ರಮ ಗೋಮಾಂಸ ದಂಧೆ: 2 ಟನ್ ಗೋಮಾಂಸ ವಶಕ್ಕೆ

ವಾಹನಗಳ ದಾಖಲೆ ಕೇಳಿದಾಗ, ಮತ್ತೊಮ್ಮೆ ತಂದು ಕೊಡುವುದಾಗಿ ಹೇಳಿ ಪರಾರಿಯಾಗುತ್ತಿದ್ದ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡಿ ಜೀವನ ನಡೆಸುತ್ತಿದ್ದ. ಈತನ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.