ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯ ವೈದ್ಯಕೀಯ ಮಹಾವಿದ್ಯಾಲಯಗಳು ಮತ್ತು ಅಧೀನ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿ ರುವ ಎಲ್ಲ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ.
ದಿನಕ್ಕೆ ಮೂರು ಬಾರಿ ಹಾಜರಾತಿ ಕಡ್ಡಾಯವಾಗಿ ನೀಡಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ. ಕಾಲೇಜು ಆರಂಭದ ಸಮಯದಲ್ಲಿ ಮತ್ತು ಮಧ್ಯಾಹ್ನ 2 ಗಂಟೆಗೆ ಹಾಗೂ ದಿನದ ಪಾಳಿ ಅಂತ್ಯದಲ್ಲಿಯೂ ವೈದ್ಯರು ಹಾಜರಾತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ತವ್ಯದ ಅವಧಿಯನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆ:
ವೈದ್ಯರು ಕರ್ತವ್ಯದ ಅವಧಿಯನ್ನು ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
(ಇದನ್ನೂ ಓದಿ: ಸಾವಿರ ಸರ್ಕಾರಿ ಸಿಬ್ಬಂದಿಗೆ ಗೃಹ ನಿರ್ಮಾಣ ನೆಪದಲ್ಲಿ ಪಂಗನಾಮ.. ₹400 ಕೋಟಿ ಹಗರಣ ಬೆಳಕಿಗೆ!)