ETV Bharat / city

ಪೊಲೀಸ್ ಠಾಣೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ: DGP ಪ್ರವೀಣ್ ಸೂದ್ ಆದೇಶ - Bangalore

ಬೀಳ್ಕೊಡುಗೆ ಸಮಾರಂಭ, ಹುಟ್ಟುಹಬ್ಬ ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗಳ ಜೊತೆ ಮಾಡಕೂಡದು.‌ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.

DGP Praveen Sood
ಡಿಜಿಪಿ ಪ್ರವೀಣ್ ಸೂದ್
author img

By

Published : Aug 2, 2021, 7:14 PM IST

ಬೆಂಗಳೂರು: ಹುಟ್ಟುಹಬ್ಬ, ಬೀಳ್ಕೊಡುಗೆ ಅಥವಾ ಸ್ವಾಗತ ಕಾರ್ಯಕ್ರಮ ಹೆಸರಿನಲ್ಲಿ ಪೊಲೀಸ್ ಠಾಣೆಗಳಲ್ಲಿ ಸಾರ್ವತ್ರಿಕವಾಗಿ ಹುಟುಹಬ್ಬ ಆಚರಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.

ಶಿಸ್ತಿನ ಇಲಾಖೆ ಎಂದು ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳೊಂದಿಗೆ ಗುರುತಿಸಿಕೊಂಡು ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಮೂಲಕ‌ ಜ‌ನರಲ್ಲಿ ಪೊಲೀಸರ ಬಗ್ಗೆ ತಪ್ಪು ಸಂದೇಶ ಮೂಡಲು ಕಾರಣವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭ, ಹುಟ್ಟುಹಬ್ಬವನ್ನು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜೊತೆ ಸಂಭ್ರಮಾಚರಣೆ ಮಾಡಕೂಡದು.‌ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪೊಲೀಸರು ಕಡ್ಡಾಯವಾಗಿ ಪಾಲಿಸಬೇಕಾದ 10 ಅಂಶಗಳ ಬಗ್ಗೆ‌ ಡಿಜಿ‌ ಪ್ರವೀಣ್ ಸೂದ್ ತಾಕೀತು ಮಾಡಿದ್ದಾರೆ. ಅವುಗಳು ಈ ಕೆಳಕಂಡಂತಿವೆ.

1. ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿ ಅಪರಾಧ ಹಿನ್ನೆಲೆಯುಳ್ಳ, ಸಮಾಜಘಾತಕ ವ್ಯಕ್ತಿ, ರೌಡಿಶೀಟರ್ ಮುಂತಾದ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಹೊಂದಿರತಕ್ಕದ್ದಲ್ಲ.

2. ಪೊಲೀಸ್ ಠಾಣೆ, ವೃತ್ತ ಕಚೇರಿ, ಉಪ ವಿಭಾಗದ ಕಚೇರಿಗಳು ಮುಂತಾದ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿದ್ದು, ಇಂತಹ ಠಾಣೆ, ಕಚೇರಿಗಳಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಮುಂತಾದ ಖಾಸಗಿ ಆಚರಣೆಗಳು ನಡೆಯದಂತೆ ಎಚ್ಚರಿಕೆ ವಹಿಸುವುದು. ಇಂತಹ ಆಚರಣೆಗಳು ಪೊಲೀಸ್ ಇಲಾಖೆಗೆ ಶೋಭೆ ತರುವುದಿಲ್ಲ.

3. ಅಪರಾಧ ಹಿನ್ನೆಲೆಯುಳ್ಳ ಸಮಾಜ ಘಾತಕ ವ್ಯಕ್ತಿಗಳು ನಡೆಸುವ ಕಾರ್ಯಕ್ರಮಗಳಲ್ಲಿ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳುವುದು ಸರಿಯಾದ ಕ್ರಮವಲ್ಲ.

4. ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಪೂರ್ವದಲ್ಲಿ ಅಂತಹ ಕಾರ್ಯಕ್ರಮ ಹಮ್ಮಿಕೊಂಡಿರುವ ವ್ಯಕ್ತಿ, ಸಂಘ - ಸಂಸ್ಥೆಯ ಪೂರ್ವಪರ ಚರಿತ್ರೆ ಪರಿಶೀಲಿಸಿದ ನಂತರ ಅಂತಹ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಸೂಕ್ತವೇ ಎಂಬುದನ್ನು ನಿರ್ಧರಿಸುವುದು.

5. ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯಾಗುವುದಿಲ್ಲ ಎಂಬುದು ಮನವರಿಕೆಯಾದ ನಂತರ, ಅಪರಾಧ ತಡೆ ಅಥವಾ ಸಂಚಾರ ನಿರ್ವಹಣೆ ಮುಂತಾದ ಉದ್ದೇಶ ಸಾಧಿಸಲು ಮಾತ್ರವೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು.

6. ಇಲಾಖೆಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಸಮಾಜಕ್ಕೆ, ಸಾರ್ವಜನಿಕರಿಗೆ ಅರಿವು ಮೂಡಿಸುವ ತಿಳಿವಳಿಕೆ ಕಾರ್ಯಕ್ರಮಗಳನ್ನು ಹಾಗೂ ಉದ್ದೇಶ ಹೊಂದಿರತಕ್ಕದ್ದು.

7. ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗಾವಣೆ, ಮುಂಬಡ್ತಿ ಹೊಂದಿ ಆಗಮಿಸುವ ಅಥವಾ ನಿರ್ಗಮಿಸುವ ಸಂದರ್ಭದಲ್ಲಿ ಸ್ವಾಗತ - ಬೀಳ್ಕೊಡುಗೆ ಆಚರಣೆಗಳಿಂದ ದೂರವಿರುವುದು ಮತ್ತು ಅಂತಹ ಆಚರಣೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಯುವುದು ಸೂಕ್ತ.

8. ಪೊಲೀಸ್ ವೃಂದ ಮತ್ತು ಸಮುದಾಯದಲ್ಲಿ ಮನೋಸ್ಥೈರ್ಯ ಹಾಗೂ ಆಸಕ್ತಿ ಹೆಚ್ಚಿಸುವ ಹಿತದೃಷ್ಟಿಯಿಂದ ಯಾವುದೇ ಕಾರ್ಯಕ್ರಮ ನಡೆಸುವುದು ಸೂಕ್ತವೆಂದು ಭಾವಿಸಿದ ಪಕ್ಷದಲ್ಲಿ, ಹಿರಿಯ ಅಧಿಕಾರಿಗಳ ಅನುಮತಿಯೊಂದಿಗೆ ಆಚರಣೆಯನ್ನು ನಡೆಸಿಕೊಳ್ಳುವುದು ಹಾಗೂ ಅಂತಹ ಕಾರ್ಯಕ್ರಮದ ರೂಪ ರೇಷೆಗಳನ್ನು ಹಿರಿಯ ಅಧಿಕಾರಿಗಳು ನಿರ್ಧರಿಸುವುದು.

9. ಸ್ವಾಗತ ಅಥವಾ ಬೀಳ್ಕೊಡುಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ/ ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ಖಾಸಗಿ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವುದನ್ನು ಖಾತ್ರಿಪಡಿಸಿಕೊಳ್ಳುವುದು

10. ಹಿರಿಯ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದ ಯಾವುದೇ ಕಾರ್ಯಕ್ರಮ ಅಥವಾ ಸಮಾರಂಭಗಳ ಆಚರಣೆಗಾಗಿ ಸಿಬ್ಬಂದಿಗಳಿಂದಾಗಲಿ ಅಥವಾ ಸಾರ್ವಜನಿಕರಿಂದಾಗಲೀ ಒತ್ತಾಯ ಪೂರ್ವಕವಾಗಿ ಹಣವನ್ನು ಸಂಗ್ರಹ ಮಾಡತಕ್ಕದ್ದಲ್ಲ.

ಇದನ್ನೂ ಓದಿ: ಬೆಂಗಳೂರು ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಸಾವು ಆರೋಪ: ಠಾಣೆ ಮುಂದೆ ಹೈಡ್ರಾಮಾ, ಖಾಕಿಯಿಂದ ಲಾಠಿ ಚಾರ್ಜ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.