ETV Bharat / city

'ಶಾಸಕರ ಮಕ್ಕಳು, ಮಾಜಿ ಸಚಿವರ ಮೇಲಿನ ಆರೋಪ ತಡೆಯಲು ಕಾಂಗ್ರೆಸ್ಸಿಗರಿಂದ ತಂತ್ರ' - ಬಿಟ್ ಕಾಯಿನ್ ವಿವಾದ

ತಮ್ಮ ಪಕ್ಷದ ಶಾಸಕರ ಮಕ್ಕಳು, ಮಾಜಿ ಸಚಿವರ ಮೇಲೆ ಬರುವ ಆರೋಪಗಳನ್ನು ತಡೆಯಲು ಕಾಂಗ್ರೆಸ್ಸಿಗರು ತಂತ್ರಗಾರಿಕೆ ರೂಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಆಕ್ಷೇಪಿಸಿದ್ದಾರೆ.

bjp
bjp
author img

By

Published : Nov 15, 2021, 8:39 PM IST

ಬೆಂಗಳೂರು: ಬಿಟ್ ಕಾಯಿನ್ (BitCoin Case) ಹಿಂದೆ ಕಾಂಗ್ರೆಸ್ಸಿಗರ ಕೈವಾಡ ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರ ಮಕ್ಕಳು, ಮಾಜಿ ಸಚಿವರ ಮೇಲೆ ಬರುವ ಆರೋಪಗಳನ್ನು ತಡೆಯಲು ಕಾಂಗ್ರೆಸ್ಸಿಗರು ತಂತ್ರಗಾರಿಕೆ ರೂಪಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ.

ಬಿಟ್ ಕಾಯಿನ್ (Bitcoin case) ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಹ್ಯಾರಿಸ್ ಅವರ ಮೇಲೆ 2018ರ ಫೆಬ್ರವರಿಯಲ್ಲಿ ನಡೆದ ಹಲ್ಲೆಗೆ ಬಿಟ್ ಕಾಯಿನ್ ಮತ್ತು ಹವಾಲಾದ ಸಂಬಂಧವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಲೇ ಹೇಳಿಕೆ ನೀಡಿದ್ದರು. ಬಳಿಕ ಕುಮಾರಸ್ವಾಮಿ ಅವರೇ ಕಾಂಗ್ರೆಸ್ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿದ್ದರು. ಆಗ ಈ ಪ್ರಕರಣವನ್ನು ತನಿಖೆ ಮಾಡಿಸಿ ಎಂದು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿಲ್ಲವೇಕೆ? ತಮ್ಮ ಇತರ ಬೆಂಬಲಿಗರ ಹೆಸರು ಹೊರಬೀಳಬಹುದೆಂಬ ಭಯ ಅವರಿಗೂ ಇತ್ತೇ ಎಂದು ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣ ಸಂಬಂಧ ಶಾಮೀಲಾದ ಆರೋಪ ಹೊತ್ತ ಕಾಂಗ್ರೆಸ್ ಶಾಸಕರಾದ ಹ್ಯಾರಿಸ್ ಮತ್ತು ಲಮಾಣಿ ಅವರ ಮಕ್ಕಳನ್ನು ಬಂಧಿಸಲು ಸಿದ್ದರಾಮಯ್ಯ ಒತ್ತಾಯಿಸುತ್ತಿಲ್ಲವೇಕೆ? ಪ್ರಕರಣದ ಸತ್ಯಾಸತ್ಯತೆ ಹೊರಬೀಳಬೇಕೆಂದು ಕಳಕಳಿ ಇದ್ದರೆ ಸಿದ್ದರಾಮಯ್ಯರವರು ಶ್ರೀಕಿ ಹೇಳಿದ ಕಾಂಗ್ರೆಸ್ ಶಾಸಕರ ಮಕ್ಕಳ ಬಂಧನಕ್ಕೆ ಒತ್ತಾಯಿಸುತ್ತಿದರು. ಆದರೆ, ಅವರ ನೀತಿ "ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತು" ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸಾಕ್ಷಾಧಾರ ನಾಶ, ತನಿಖೆ ಹಾದಿ ತಪ್ಪಿಸುವಲ್ಲಿ ಕಾಂಗ್ರೆಸ್ ಎತ್ತಿದ ಕೈ. ಡಿ.ಕೆ.ರವಿ ಸಾವಿನ ಪ್ರಕರಣದಲ್ಲೂ ಹೀಗೇ ಆಗಿದೆ. ತನ್ನ ಬಟ್ಟಲಿನಲ್ಲಿ ಹೆಗ್ಗಣ ಬಿದ್ದಿರುವಾಗ ಬೇರೆಯವರ ಗ್ಲಾಸಿನಲ್ಲಿ ನೊಣ ಬಿದ್ದಿದೆ ಎಂದು ಹೇಳಿ ಜಾರಿಕೊಳ್ಳುವ ಪ್ರವೃತ್ತಿ ಕಾಂಗ್ರೆಸ್ ಮುಖಂಡರದು. ಪ್ರಧಾನಿ ನರೇಂದ್ರ ಮೋದಿ ಅವರ ಏಳು ವರ್ಷಗಳ ಆಡಳಿತದ ಪರಿಣಾಮವಾಗಿ ದೇಶದೆಲ್ಲೆಡೆ ಕಾಂಗ್ರೆಸ್ ನಾಮಾವಶೇಷ ಆಗುವ ಸ್ಥಿತಿಗೆ ತಲುಪಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 100 ದಿನಗಳ ಕಾಲ ಅತ್ಯುತ್ತಮ ಕಾರ್ಯಕ್ರಮ ನೀಡಿದ್ದಾರೆ. ಜನಪರ-ಜನಪ್ರಿಯ ಆಡಳಿತ ಅವರದು. ಇದನ್ನು ತಡೆದುಕೊಳ್ಳಲಾಗದೆ ಕಾಂಗ್ರೆಸ್‌ನವರು ಅನಗತ್ಯ ಹಾಗೂ ಆಧಾರವಿಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ರಚನಾತ್ಮಕ ಸಹಕಾರದ ಬದಲಾಗಿ ಹತಾಶೆಯ ಟೀಕೆಗೆ ತನ್ನನ್ನು ಸೀಮಿತಗೊಳಿಸಿದೆ ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ ಡ್ರಗ್ಸ್ ಮಾಫಿಯಾ ಭೇದಿಸಿದ್ದರು. ಅದೊಂದು ದಿಟ್ಟ ಕ್ರಮ. ಡ್ರಗ್ಸ್ ಮಾಫಿಯಾ ಮಾತ್ರವಲ್ಲದೆ ಬಿಟ್ ಕಾಯಿನ್ ಹಿಂದೆ ಕಾಂಗ್ರೆಸ್ ಕಡೆ ಬೆಟ್ಟು ಮಾಡುವ ವಿಚಾರಗಳಿವೆ. ಕಾಂಗ್ರೆಸ್ ಶಾಸಕರ ಮಕ್ಕಳು, ಮಾಜಿ ಸಚಿವರ ಮೇಲೆ ಬರುವ ಆರೋಪಗಳನ್ನು ತಡೆಯಲು ಕಾಂಗ್ರೆಸ್ಸಿಗರು ತಂತ್ರಗಾರಿಕೆ ರೂಪಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.

2016-17ರಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ಅವರು ಐಟಿಬಿಟಿ ಸಚಿವರಾಗಿದ್ದರು. ಅ ಸಂದರ್ಭದಲ್ಲಿ ಬಂಧಿತನಾಗಿದ್ದ ಶ್ರೀಕಿಯನ್ನು ಆಗ ಬಿಟ್ಟು ಕಳಿಸಿಯೂ ಆಗಿತ್ತು. ಹೋಟೆಲ್ ಅಶೋಕದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಿಟ್ ಕಾಯಿನ್ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದರು. ಬಿಟ್ ಕಾಯಿನ್ ಮತ್ತು ಕ್ರಿಪ್ಟೋ ಕರೆನ್ಸಿ ಬಗ್ಗೆ ತಿಳಿದುಕೊಂಡು ನಂತರ ಆ ಮಾಹಿತಿಯನ್ನು ಬಚ್ಚಿಟ್ಟದ್ದು ಯಾಕೆ? ಈ ಒಟ್ಟು ಬಿಟ್ ಕಾಯಿನ್ ದಂಧೆಯ ಕುರಿತು ಸವಿವರವಾದ ಪತ್ರಿಕಾ ಹೇಳಿಕೆಯ ನಂತರ ಪ್ರಿಯಾಂಕ್ ಖರ್ಗೆ ಅವರ ಜಾಣಮೌನ ಸಂಶಯದ ಹುತ್ತ ಕಾಂಗ್ರೆಸ್ ಮುಖಂಡರ ಸುತ್ತ ಸುತ್ತುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರೇ ಈ ಎಲ್ಲ ಗೊಂದಲಗಳು ನಿಮ್ಮ ಮೂಗಿನ ಕೆಳಗೆ, ನಿಮ್ಮ ಸರ್ಕಾರದ ಅವಧಿಯಲ್ಲೇ ನಡೆದಿದ್ದು. ನಿಮ್ಮ ಪಕ್ಷದ ರಾಷ್ಟ್ರೀಯ ಪ್ರಭಾರಿ ಸುರ್ಜೇವಾಲಾರು ಹೇಳಿದಂತೆ 2016ರಿಂದ ನಡೆದಿರುವ ಈ ಅವ್ಯವಹಾರದ ಕುರಿತು ಸ್ಪಷ್ಟ ಮಾಹಿತಿಗಳು ಇದ್ದರೂ ಬೇಜವಾಬ್ದಾರಿಯ ನಿಮ್ಮ ಇಂದಿನ ನಡೆ ಕೋತಿ ತಾನು ತಿಂದು ಮೇಕೆಯ ಮೂತಿಗೆ ಒರೆಸಿದಂತೆ ಆಗಿಲ್ಲವೇ ಎಂದು ಕಾರ್ಣಿಕ್ ಪ್ರಶ್ನೆ ಹಾಕಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.