ETV Bharat / city

ಬಿಟ್ ಕಾಯಿನ್ ಆರೋಪವನ್ನೇ ನಿರ್ಲಕ್ಷಿಸಿ ಎಂದು ಪ್ರಧಾನಿ ಮೋದಿ ಹೇಳಿದರೆ ಹೇಗೆ?: ಸಿದ್ದರಾಮಯ್ಯ ಪ್ರಶ್ನೆ

ಬಿಟ್ ಕಾಯಿನ್ ಹಗರಣದಲ್ಲಿ (Bitcoin Scam) ಮುಖ್ಯಮಂತ್ರಿಗಳು ಭಾಗಿಯೋ? ಇಲ್ಲವೋ? ನಮಗೆ ಗೊತ್ತಿಲ್ಲ. ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಎಂದು ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದ್ದಾರೆ..

siddaramaiah
siddaramaiah
author img

By

Published : Nov 12, 2021, 7:56 PM IST

ಬೆಂಗಳೂರು : ಬಿಟ್ ಕಾಯಿನ್ (Bitcoin Scam) ಆರೋಪವನ್ನೇ ನಿರ್ಲಕ್ಷಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೆ ಹೇಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ (PM MODI) ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಎಂದು ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ (Bitcoin Scam) ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಪ್ರಧಾನಿಗಳು ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ? ಎಂದಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಮುಖ್ಯಮಂತ್ರಿಗಳು ಭಾಗಿಯೋ? ಇಲ್ಲವೋ? ನಮಗೆ ಗೊತ್ತಿಲ್ಲ. ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ, ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆಮೇಲೆ ನೋಡಿಕೊಳ್ಳೋಣ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

(Bitcoin Scam : 'ತನಿಖಾವಧಿಯಲ್ಲಿ ನನ್ನ ಮಗನಿಗೆ ಡ್ರಗ್ಸ್​ ನೀಡಿದ್ದಾರೆ'.. ಪೊಲೀಸರ ವಿರುದ್ಧ 'ಶ್ರೀಕಿ' ತಂದೆ ಆರೋಪ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.