ETV Bharat / city

ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್​ಗೆ ರವಾನೆ, ಉಸ್ತುವಾರಿಗಳ ನೇಮಕ: ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧಾರ!

author img

By

Published : Oct 1, 2020, 8:51 PM IST

ಇಂದು ನಡೆದ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗು ಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ಆರು ಕ್ಷೇತ್ರಗಳಿಗೆ ಉಸ್ತಯವಾರಿಗಳನ್ನು ಕೋರ್ ಕಮಿಟಿ ಸಭೆಯಲ್ಲಿ ನೇಮಕ ಮಾಡಲಾಯಿತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದರು.

bjp-appointed-stewards-for-karnataka-by-election-in-core-committee
ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಿಕೊಡುವ ನಿರ್ಧಾರದ ಜೊತೆಗೆ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯನ್ನು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಬಿಜೆಪಿ ಕೋರ್ ಕಮಿಟಿ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕುರಿತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಮುಖ್ಯವಾಗಿ ಅಲ್ಲಿಯ ಘಟನೆ ಒಟ್ಟು ಪೂರ್ವನಿಯೋಜಿತ ಷಡ್ಯಂತ್ರ ಎನ್ನುವುದನ್ನು ವಿವರಗಳ ಸಹಿತ ಸಭೆಯಲ್ಲಿ ಚರ್ಚೆ ನಡೆಯಿತು.

ಈ ಕುರಿತು ಹೈಕೋರ್ಟ್ ಕೂಡಾ ತನಿಖೆಗೆ ಆದೇಶ ಮಾಡಿದೆ. ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾದಳ ತನಿಖೆ ನಡೆಸುತ್ತಿದೆ. ಎಸಿಬಿ ಕೂಡ ತನಿಖೆ ಮುಂದುವರೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇನ್ನಷ್ಟು ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ವಹಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದರು.

  • ಉಸ್ತುವಾರಿ ನೇಮಕ

ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗು ಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ಆರು ಕ್ಷೇತ್ರಗಳಿಗೆ ಉಸ್ತಯವಾರಿಗಳನ್ನು ಕೋರ್ ಕಮಿಟಿ ಸಭೆಯಲ್ಲಿ ನೇಮಕ ಮಾಡಲಾಯಿತು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

ಶಿರಾ ವಿಧಾನಸಭಾ ಕ್ಷೇತ್ರ- ಡಿಸಿಎಂ ಗೋವಿಂದ ಕಾರಜೋಳ,‌ಡಿಸಿಎಂ ಅಶ್ವತ್ಥನಾರಾಯಣ, ಎನ್. ರವಿಕುಮಾರ್, ಬಿ.ವೈ ವಿಜಯೇಂದ್ರ, ಸಂಸದ ಪಿ.ಸಿ ಮೋಹನ್, ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್ ಮತ್ತು ತಿಪ್ಪೇಸ್ವಾಮಿ

ರಾಜರಾಜೇಶ್ವರಿ ಕ್ಷೇತ್ರ- ಅರವಿಂದ ಲಿಂಬಾವಳಿ, ಆರ್ ಅಶೋಕ್, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ್, ಎಸ್.ಆರ್ ವಿಶ್ವನಾಥ್

ಬೆಂಗಳೂರು ಶಿಕ್ಷಕರ ಕ್ಷೇತ್ರ- ಸುರೇಶ್ ಕುಮಾರ್, ಸಿದ್ದೇಶ್

ಆಗ್ನೇಯ ಪದವೀಧರ ಕ್ಷೇತ್ರ- ಮಾಧುಸ್ವಾಮಿ,ಡಾ. ಸುಧಾಕರ್ ನಾರಾಯಣಸ್ವಾಮಿ, ಶಿವಯೋಗಿಸ್ವಾಮಿ,

ಪಶ್ಚಿಮ ಪದವೀಧರ ಕ್ಷೇತ್ರ- ಜಗದೀಶ್ ಶೆಟ್ಟರ್, ಶಿವರಾಮ್ ಹೆಬ್ಬಾರ್, ಮಹೇಶ್ ತೆಂಗಿನಕಾಯಿ

ಈಶಾನ್ಯ ಶಿಕ್ಷಕರ ಕ್ಷೇತ್ರ- ಈಶ್ವರಪ್ಪ, ಶಶಿಕಲಾ ಜೊಲ್ಲೆ,ಮಹಾಂತೇಶ್ ಕವಟಗಿಮಠ

  • ಹೈಕಮಾಂಡ್​ಗೆ ರವಾನೆಯಾಗಲಿರುವ ಅಭ್ಯರ್ಥಿಗಳ ಪಟ್ಟಿ

ಇನ್ನು ಎರಡು ವಿಧಾನಸಭಾ ಕ್ಷೇತ್ರ ಹಾಗು ಪರಿಷತ್​ನ ನಾಲ್ಕು ಕ್ಷೇತ್ರಗಳಿಗೂ ಆಕಾಂಕ್ಷಿಗಳ ಹೆಸರನ್ನು ಚರ್ಚಿಸಿ, ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಸಿದ್ದಪಡಿಸಿದ್ದು ಪಟ್ಟಿಯನ್ನು ಹೈಕಮಾಂಡ್​ಗೆ ಕಳಿಸಿಕೊಡಲಾಗುತ್ತದೆ ಅಂತಿಮವಾಗಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದರು.

  • ಸಂಭಾವ್ಯ ಪಟ್ಟಿ

ರಾಜರಾಜೇಶ್ವರಿ ನಗರ ಕ್ಷೇತ್ರ- ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ

ಶಿರಾ ಕ್ಷೇತ್ರ- ಎಸ್.ಆರ್. ಗೌಡ, ಬಿ.ಕೆ. ಮಂಜುನಾಥ್ ಮತ್ತು ರಾಜೇಶ್ ಗೌಡ

ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಒಂದೊಂದು ಹೆಸರು, ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ರವಾನೆ: ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಪುಟ್ಟಣ್ಣ ಹೆಸರು ಶಿಫಾರಸು , ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದ ಹೆಸರು ಶಿಫಾರಸು,
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರ್ ಹೆಸರು ಶಿಫಾರಸು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ ಹೆಸರು ಶಿಫಾರಸು

ಗೈರು: ಡಿಸಿಎಂ ಗೋವಿಂದ ಕಾರಜೋಳ ಕೊರೋನ ಪಾಸಿಟಿವ್ ಹಿನ್ನಲೆ, ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪತ್ನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ, ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿರೋ ಕಾರಣ ಹಾಗು ಆರ್.ಅಶೋಕ್ ವೈಯಕ್ತಿಕ ಕಾರಣದಿಂದ ಇಂದಿನ ಸಭೆಗೆ ಗೈರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.