ETV Bharat / city

ವಾಮಮಾರ್ಗ ಹಿಡಿದು ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನ: ರಾಮಲಿಂಗಾರೆಡ್ಡಿ

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮುನ್ನಡೆಸಲು ಸಂಖ್ಯಾಬಲ ಮುಖ್ಯವಾಗಿದೆ. ಅಗತ್ಯ ಸಂಖ್ಯಾಬಲ ನಮಗಿದೆ. ಆದರೂ ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಲ್ಲ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ

ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ
author img

By

Published : Feb 9, 2019, 2:00 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ರಾಜ್ಯ ಬಜೆಟ್​ಗೆ ಸದನದ ಒಪ್ಪಿಗೆ ಸಿಗಲಿದೆ. ಆಯವ್ಯಯದ ಬಿಲ್​ಗಳು ಪಾಸ್ ಆಗಲಿವೆ. ಈ ಸರ್ಕಾರವೂ ಮುಂದುವರೆಯಲಿದೆ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಡೆಸುತ್ತಿರುವ ಆಪರೇಷನ್ ಕಮಲ ವಿರೋಧಿಸಿ ನಗರದ ಆನದಂರಾವ್ ವೃತ್ತದ ಸಮೀಪವಿರುವ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಇಂತಹ ಕೆಲಸಕ್ಕೆ ಮುಂದಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮುನ್ನಡೆಸಲು ಸಂಖ್ಯಾಬಲ ಮುಖ್ಯವಾಗಿದೆ. ಅಗತ್ಯ ಸಂಖ್ಯಾಬಲ ನಮಗಿದೆ. ಆದರೂ ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಲ್ಲ ಎಂದರು.

ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ
undefined

ಆಪರೇಷನ್ ಕಮಲದ ಪ್ರಯತ್ನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ. ಅವರ ಕುಮ್ಮಕ್ಕಿನಿಂದಲೇ ಯಡಿಯೂರಪ್ಪನವರು ಹೀಗೆಲ್ಲ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ಯಶಸ್ವಿಯಾಗಲ್ಲ. ಬಹುಮತವಿರುವ ಸರ್ಕಾರ ಬಜೆಟ್ ಮಂಡಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಟ್​ ಬಹಿಷ್ಕರಿಸಿ ಬಿಜೆಪಿಯವರು ಹೊರನಡೆಯುವ ಮೂಲಕ ತಮಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ವಿಶ್ವಾಸವಿಲ್ಲ ಎಂದು ತೋರಿಸಿದ್ದಾರೆ. ಅವರು ಏನೇ ಮಾಡಿದರೂ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದರು.

ಅತೃಪ್ತರು ರಾಜೀನಾಮೆ ಕೊಟ್ಟು ಹೋಗಲಿ:

ಶಾಸಕರು ಒಂದು ಪಕ್ಷದ ಚಿಹ್ನೆಯ ಮೇಲೆ ಆಯ್ಕೆಯಾದಾಗ ಆ ಪಕ್ಷಕ್ಕೆ ನಿಷ್ಠರಾಗಿ ಇರಬೇಕು. ಅದು ಸಾಧ್ಯವಿಲ್ಲ ಎಂದರೆ ರಾಜೀನಾಮೆ ಕೊಟ್ಟು ಹೋಗಲಿ. ಅದು ಬಿಟ್ಟು ಹೀಗೆಲ್ಲಾ ಮಾಡುವುದು ಸರಿಯಲ್ಲ ಎಂದು ರೆಬಲ್ ಶಾಸಕರ ವಿರುದ್ಧ ರಾಮಲಿಂಗಾರೆಡ್ಡಿ ಗುಡುಗಿದರು.

ಇನ್ನು ಪ್ರತಿಭಟನೆಯಲ್ಲಿ ಶಾಸಕಿ ಸೌಮ್ಯಾರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಿಜೆಪಿ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ, ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Intro:ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಂಡಿಸಿರುವ ರಾಜ್ಯ ಮುಂಗಡ ಬಜೆಟ್ ಗೆ ಸದನದ ಒಪ್ಪಿಗೆ ಸಿಗಲಿದೆ,ಆಯವ್ಯಯದ ಬಿಲ್ ಗಳು ಪಾಸ್ ಅಗಲಿವೆ ಈ ಸರ್ಕಾರವೂ ಮುಂದುವರೆಯಲಿದೆ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Body:ಬಿಜೆಪಿ ನಡೆಸುತ್ತಿರುವ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಆನದಂರಾವ್ ವೃತ್ತದ ಸಮೀಪವಿರುವ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ,ಶಾಸಕಿ ಸೌಮ್ಯಾರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಿಜೆಪಿ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಇದನ್ನು ನಿಲ್ಲಿಸುವಂತೆ ಆಗ್ರಹಿಸಿದರು.

ಈ ವೇಳೆ ಈಟಿವಿ ಭಾರತ್ ಜೊತೆ ಮಾತನಾಡಿದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಹಾಗಾಗಿ ಇಂತಹ ಕೆಲಸಕ್ಕೆ ಮುಂದಾಗಿದೆ,ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮುನ್ನಡೆಸಲು ಸಂಖ್ಯಾಬಲ ಮುಖ್ಯವಾಗಿದೆ ಅಗತ್ಯ ಸಂಖ್ಯಾಬಲ ನಮಗಿದೆ ಆದರೂ ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದಾರೆ ಇದರಲ್ಲಿ ಅವರು ಯಶಸ್ವಿಯಾಗಲ್ಲ ಎಂದರು.

ಆಪರೇಷನ್ ಕಮಲದ ಪ್ರಯತ್ನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ, ಅವರ ಕುಮ್ಮಕ್ಕಿನಿಂದಲೇ ಯಡಿಯೂಯ ಹೀಗೆಲ್ಲಾ ಮಾಡುತ್ತಿದ್ದಾರೆ ಅವರು ಏನೇ ಮಾಡಿದರೂ ಯಶಸ್ವಿಯಾಗಲ್ಲ ಎಂದರು.

ಬಹುಮತವಿರುವ ಸರ್ಕಾರ ಬಜೆಟ್ ಮಂಡಿಸಿದೆ.ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಡ್ ಅನ್ನು ಬಹಿಷ್ಕರಿಸಿ ಬಿಜೆಪಿ ಹೊರನಡೆಯುವ ಮೂಲಕ ತಮಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ವಿಶ್ವಾಸವಿಲ್ಲ ಎಂದು ತೋರಿಸಿದ್ದಾರೆ,ಅವರು ಏನೇ ಮಾಡಿದರೂ ನಮ್ಮ ಸರ್ಕಾರ ಸುಭದ್ರವಾಗಿರಲಿದೆ, ಬಜೆಟ್ ಮಂಡನೆ ವೇಳೆ ನಡೆದ ಗದ್ದಲದಂತೆ ಬಜೆಟ್ ಅನ್ನು ಮತಕ್ಕೆ ಹಾಕಿದಾಗಲೂ ಗದ್ದಲವೆಬ್ಬಿಸಬಹುದಿ ಏನಾದರೂ ಬಜೆಟ್ ಪಾಸ್ ಆಗುತ್ತೆ, ಬಿಲ್ ಗಳು ಕೂಡ ಪಾಸ್ ಆಗಲಿವೆ ಎಂದರು.

Conclusion:ಅತೃಪ್ತರು ರಾಜೀನಾಮೆ ಕೊಟ್ಟು ಹೋಗಲಿ:
ಶಾಸಕರು ಒಂದು ಪಕ್ಷದ ಚಿನ್ಹೆಯ ಮೇಲೆ ಆಯ್ಕೆಯಾದಾಗ ಆ ಪಕ್ಷಕ್ಕೆ ನಿಷ್ಟರಾಗಿ ಇರಬೇಕು, ಅದು ಸಾಧ್ಯವಿಲ್ಲ ಎಂದರೆ ರಾಜೀನಾಮೆ ಕೊಟ್ಟು ಹೋಗಲಿ ಅದು ಬಿಟ್ಟು ಹೀಗೆಲ್ಲಾ ಮಾಡುವುದು ಸರಿಯಲ್ಲ ಎಂದು ರೆಬಲ್ ಶಾಸಕರ ವಿರುದ್ಧ ರಾಮಲಿಂಗಾ ರೆಡ್ಡಿ ಗರಂ ಆದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.