ETV Bharat / city

ಗುರುವಾರ ಬಿಜೆಪಿ ಕೋರ್ ಕಮಿಟಿ ಸಭೆ: ಸಂಪುಟ ವಿಸ್ತರಣೆ ಮೇಲೆ ಎಲ್ಲರ ಗಮನ

author img

By

Published : Jan 15, 2020, 2:47 AM IST

ಜ.16 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವ ಸಾಧ್ಯತೆ.

ಗುರುವಾರ ಬಿಜೆಪಿ ಕೋರ್ ಕಮಿಟಿ ಸಭೆ
ಗುರುವಾರ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಜ.16 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ನಡೆಯಲಿದೆ.

ಗುರುವಾರ ಸಂಜೆ 5.30 ಕ್ಕೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸಂಪುಟದಲ್ಲಿ ಯಾರಿಗೆ ಮಣೆ ಹಾಕಬೇಕು ಎಂಬುದರ ಬಗ್ಗೆ ಚರ್ಚಿಸುವ ಜೊತೆಗೆ ಸಂಪುಟ ವಿಸ್ತರಣೆಗೆ ದಿನ ನಿಗದಿ ಮಾಡುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎನ್ನಲಾಗಿದೆ.

ಗುರುವಾರದಂದೇ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮುಂದಿನ ಮೂರು ವರ್ಷಕ್ಕೆ ಅನ್ವಯವಾಗುವಂತೆ ಮತ್ತೆ ಅಧಿಕಾರ ಸ್ವೀಕಾರ ಮಾಡಲಿದ್ದು, ನೂತನ ಜಿಲ್ಲಾಧ್ಯಕ್ಷರಿಗೂ ಅಭಿನಂದನೆ ಸಲ್ಲಿಸಲಾಗುತ್ತದೆ. ಅದರ ಬೆನ್ನಲ್ಲೇ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಮಿತ್ ಶಾ ಜೊತೆ ಚರ್ಚೆಗೂ ಮುನ್ನ ಕೋರ್ ಕಮಿಟಿ ತನ್ನ ನಿರ್ಧಾರ ಕೈಗೊಳ್ಳಲಿದೆ.

Intro:

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಜನವರಿ 16 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ನಡೆಯಲಿದೆ.

ಗುರುವಾರ ಸಂಜೆ 5.30 ಕ್ಕೆ ಮಲ್ಲೇಶ್ವರಂನ ಬಿಜೆಪಿ ಕಚೇರಿ ಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ಯಾರು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುವ ಜೊತೆಗೆ ಸಂಪುಟ ವಿಸ್ತರಣೆ ದಿನಾಂಕ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎನ್ನಲಾಗಿದೆ.

ಗುರುವಾರದಂದೇ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮುಂದಿನ ಮೂರು ವರ್ಷಕ್ಕೆ ಅನ್ವಯವಾಗುವಂತೆ ಮತ್ತೆ ಅಧಿಕಾರ ಸ್ವೀಕಾರ ಮಾಡಲಿದ್ದು ನೂತನ ಜಿಲ್ಲಾಧ್ಯಕ್ಷರಿಗೂ ಅಭಿನಂದನೆ ಸಲ್ಲಿಸಲಾಗುತ್ತದೆ ಅದರ ಬೆನ್ನಲ್ಲೇ ಕೋರ್ ಕಮಿಟಿ ಸಭೆ ನಡೆಯಲಿದ್ದು ಅಮಿತ್ ಶಾ ಜೊತೆ ಚರ್ಚೆಗೂ ಮುನ್ನ ಕೋರ್ ಕಮಿಟಿ ತನ್ನ ನಿರ್ಧಾರ ಕೈಗೊಳ್ಳಲಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.