ETV Bharat / city

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್​​... 15 ಸ್ಥಾನ ಭರ್ತಿಗೆ ಗ್ರೀನ್ ಸಿಗ್ನಲ್? - ಹೆಚ್. ವಿಶ್ವನಾಥ್, ರಮೇಶ್ ಜಾರಕಿಹೊಳಿ, ಎಸ್.ಟಿ. ಸೋಮಶೇಖರ್

ಆಗಸ್ಟ್​ 9ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಲಿದೆ. 15 ಸಚಿವ ಸ್ಥಾನಗಳನ್ನು ಭರ್ತಿಗೆ ಬಿಜೆಪಿ ಹೈಕಮಾಂಡ್​ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.

15 ಸ್ಥಾನ ಭರ್ತಿಗೆ ಗ್ರೀನ್ ಸಿಗ್ನಲ್
author img

By

Published : Aug 6, 2019, 5:10 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಅಗಸ್ಟ್ 9 ರಂದು ವಿಸ್ತರಣೆಯಾಗುವ ಸಾಧ್ಯತೆಯಿದೆ. ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಬಿ. ಶ್ರೀರಾಮುಲು ಸೇರಿದಂತೆ 12ರಿಂದ 15 ಮಂದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.

ಮೊದಲ‌ ಹಂತದಲ್ಲಿ 15 ಸಚಿವ ಸ್ಥಾನ, 30 ನಿಗಮ ಮಂಡಳಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಸಚಿವರಾಗುವವರ ಪಟ್ಟಿಯಲ್ಲಿ ಬಸವರಾಜ ಬೊಮ್ಮಾಯಿ, ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಇದ್ದಾರೆ. ಶಾಸಕತ್ವ ಅನರ್ಹಗೊಂಡಿರುವವರ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿ ಪೂರಕವಾಗಿ ಇತ್ಯರ್ಥವಾದರೆ ಹೆಚ್. ವಿಶ್ವನಾಥ್, ರಮೇಶ್ ಜಾರಕಿಹೊಳಿ, ಎಸ್.ಟಿ. ಸೋಮಶೇಖರ್ ಸಚಿವರಾಗಲಿದ್ದಾರೆ. ಒಂದು ವೇಳೆ ಶಾಸಕತ್ವದಿಂದ ಅನರ್ಹಗೊಂಡವರ ಪ್ರಕರಣ ತ್ವರಿತವಾಗಿ ಇತ್ಯರ್ಥವಾಗದೆ ಇದ್ದರೆ ಬಿಜೆಪಿಯ ಶಾಸಕರು ಮಾತ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ 26ರಂದು ಪ್ರಮಾಣವಚನ ಸ್ವೀಕರಿಸಿದ್ದಲ್ಲದೆ, ತಮ್ಮ ಸರ್ಕಾರಕ್ಕಿರುವ ಬಹುಮತವನ್ನು ಜುಲೈ 29ರಂದು ಸಾಬೀತುಪಡಿಸಿದ್ದರು. ಇದಾದ ನಂತರ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಭೆ ಸೇರಿದಂತೆ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು, ಸಹಜವಾಗಿಯೇ ಸಂಪುಟ ವಿಸ್ತರಣೆಯಿಲ್ಲದೆ ಹೆಜ್ಜೆ ಇಡುತ್ತಿರುವುದು ಟೀಕೆಗೆ ಕಾರಣವಾಗಿದೆ.

ಈ ಮಧ್ಯೆ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದ ಲಾಬಿ ನಡೆಯುತ್ತಿದೆಯಾದರೂ, ಬಿಜೆಪಿ ಹೈಕಮಾಂಡ್ ಅತ್ಯಂತ ಬಲಿಷ್ಠವಾಗಿರುವುದರಿಂದ ಯಾರೂ ಬಹಿರಂಗವಾಗಿ ಚಟುವಟಿಕೆ ನಡೆಸುತ್ತಿಲ್ಲ. ಆದರೂ ಹೈಕಮಾಂಡ್ ಮತ್ತು ಸಂಘ ಪರಿವಾರದ ನಾಯಕರ ಬಳಿ ಸಚಿವ ಸ್ಥಾನಕ್ಕಾಗಿ ಒಂದು ಮಟ್ಟದಲ್ಲಿ ಪ್ರಮುಖ ನಾಯಕರು ಲಾಬಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಬ್ರಾಹ್ಮಣರ ಕೋಟಾದಡಿ ಸುರೇಶ್ ಕುಮಾರ್ ಇಲ್ಲವೇ ರವಿ ಸುಬ್ರಮಣ್ಯ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೇ ರೀತಿ ದಾವಣಗೆರೆ ಜಿಲ್ಲೆಯಿಂದ ಸಚಿವರಾಗಲು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಎಂ.ಪಿ. ರವೀಂದ್ರನಾಥ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ಇಂದು ಪಕ್ಷದ ನಾಯಕರಾದ ಜೆ.ಪಿ. ನಡ್ಡಾ ಸೇರಿದಂತೆ ಹಲವರನ್ನು ಭೇಟಿ ಮಾಡಿದರಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೂ ಚರ್ಚಿಸಿದ್ದಾರೆ. ಮೂಲಗಳ ಪ್ರಕಾರ, ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಬೇಕಾದವರ ಪಟ್ಟಿಯೊಂದನ್ನು ತಯಾರಿಸಿಕೊಂಡು ದೆಹಲಿಗೆ ತೆರಳಿದ್ದು, ಅದೇ ಕಾಲಕ್ಕೆ ಸಂಘ ಪರಿವಾರದ ನಾಯಕರ ಶಿಫಾರಸು ಪಟ್ಟಿಯೂ ವರಿಷ್ಠರಿಗೆ ತಲುಪಿದೆ. ಹೀಗಾಗಿ ಯಡಿಯೂರಪ್ಪ ಅವರ ಪಟ್ಟಿಯೊಂದಿಗೆ, ಸಂಘ ಪರಿವಾರದ ನಾಯಕರು ರವಾನಿಸಿದ ಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ವರಿಷ್ಠರು ಮೊದಲ ಕಂತಿನ ಪಟ್ಟಿಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎನ್ನಲಾಗ್ತಿದೆ.

ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲು ಈವರೆಗೆ ಒಪ್ಪಿಗೆ ನೀಡದ ಹೈಕಮಾಂಡ್ ಸದ್ಯದ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪರ್ಯಾಯವಾಗಿ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸುವ ಅಗತ್ಯವಿಲ್ಲ. ಹೀಗಾಗಿ ಉಪಮುಖ್ಯಮಂತ್ರಿಗಳಾಗಲು ತವಕಿಸುತ್ತಿದ್ದ ಹಲವು ನಾಯಕರು ನಿರಾಸೆಗೊಳ್ಳುವಂತಾಗಿದ್ದು, ಇಷ್ಟಾದರೂ ಚಕಾರ ಎತ್ತದೆ ಮೌನವಾಗಿರಬೇಕಾದ ಅಸಹಾಯಕ ಸ್ಥಿತಿಯಲ್ಲಿದ್ದಾರೆ.

ತಂಡ ರಚನೆ...?

ಈ ಮಧ್ಯೆ ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ, ಅದರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇಡಲು, ಸಲಹೆ ನೀಡಲು, ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರಿರುವ ಒಂದು ತಂಡ ನೇಮಕಗೊಳ್ಳಲಿದೆ. ಯಾವುದೇ ವಿಷಯಕ್ಕೆ ಸಂಬಂಧಪಟ್ಟಂತೆ ಸರ್ಕಾರ ಒಂದು ನಿರ್ಣಯ ಕೈಗೊಳ್ಳುವ ಮುನ್ನ ಈ ತಂಡದ ಗಮನಕ್ಕೆ ತರಬೇಕು ಎಂದು ಈಗಾಗಲೇ ಮೌಖಿಕವಾಗಿ ಸೂಚನೆ ನೀಡಲಾಗಿದೆ. ಈ ತಂಡ ಹೈಕಮಾಂಡ್ ಹಾಗೂ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಲಿದೆಯಂತೆ. ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾದ ಕೆಲಸಗಳ ಬಗ್ಗೆ ಹೈಕಮಾಂಡ್ ನಾಯಕರು ನೀಡುವ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು, ಈ ತಂಡ ನೀಡುವ ಸಲಹೆಗಳನ್ನು ಸರ್ಕಾರ ಪರಿಗಣಿಸಬೇಕಾಗುತ್ತದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Intro:ಬೆಂಗಳೂರು: ಆಗಸ್ಟ್ 9 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಬಹುತೇಕ ಸಮ್ಮತಿ ನೀಡಿದೆ ಎನ್ನಲಾಗಿದ್ದು,ಮೊದಲ‌ ಹಂತದಲ್ಲಿ 15 ಸಚಿವ ಸ್ಥಾನ 30 ನಿಗಮ ಮಂಡಳಿ ಭರ್ತಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹೈಕಮಾಂಡ್ ಜೊತೆ ಸಚಿವ ಸಂಪುಟ ರಚನೆ ಸಂಬಂಧ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ.ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.

ಸರ್ಕಾರ ರಚನೆ ಪ್ರಹಸನ,ಅತೃಪ್ತರ ಶಾಸಕರು ಅನರ್ಹಗೊಂಡ ವಿಷಯ, ಅತೃಪ್ತರಿಂದ ಸರ್ಕಾರ ರಚನೆಗೆ ಸಹಕಾರವಾದ ಕುರಿತು ನಡ್ಡಾಗೆ ಬಿಎಸ್ವೈ ಸಮಗ್ರ ಮಾಹಿತಿ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಿದರು.

ಹಳಬರು ಮತ್ತು ಹೊಸಬರ ಸಮ್ಮಿಶ್ರಣ ಇರುವ ಸಚಿವ ಸಂಪುಟ ರಚನೆ, ಯುವ ಶಾಸಕರಿಗೂ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿದೆ.ಮೊದಲ ಹಂತದಲ್ಲಿ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡುವ ಬದಲು 15 ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವುದು ಸೂಕ್ತ ಎನ್ನುವ ಅಭಿಪ್ರಾಯ ಜೆ.ಪಿ ನಡ್ಡಾ ಅವರಿಂದ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು
ಎರಡನೇ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಮೂಲಕ ಉಳಿದ ಸ್ಥಾನ ಭರ್ತಿ ಮಾಡಿಕೊಳ್ಳಬೇಕು ಅದರಲ್ಲಿ 14 ಅನರ್ಹ ಶಾಸಕರಲ್ಲಿ ಕೆಲವರಿಗೆ ಅಥವಾ ಅವರ ಕುಟುಂದವರಿಗೆ ಸಚಿವ ಸ್ಥಾನ ನೀಡಲು ಚರ್ಚೆ ನಡೆದಿದೆ ಎನ್ನಲಾಗಿದೆ.

ಮೊದಲ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಜೊತೆಗೆ 30 ನಿಗಮ-ಮಂಡಳಿಗೆ ಶಾಸಕರನ್ನು ನೇಮಕ ಮಾಡುವ ಮೂಲಕ ಪಕ್ಷದಲ್ಲಿ ತಲೆದೂರಬಹುದಾದ ಭಿನ್ನಮತೀಯ ಚಟುವಟಿಕೆ ತಡೆಯಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಸಂಬಂಧ ಜೆ.ಪಿ ನಡ್ಡಾ ಜೊತೆ ಮಾತುಕತೆ ಪೂರ್ಣಗೊಳಿಸಲಾಗಿದ್ದು ನಡ್ಡಾ ಸಲಹೆಯಂತೆ ಸಂಪುಟ ರಚನೆ ಬಹುತೇಕ ಖಚಿತ ಎನ್ನಲಾಗಿದೆ.ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗು ಪ್ರಧಾನಿ ಮೋದಿ ಕೂಡ ಬಹುತೇಕ ಇದೇ ನಿಲುವನ್ನು ವ್ಯಕ್ತಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಚಿವರ ಪಟ್ಟಿಗೆ ಇಂದೇ ಒಪ್ಪಿಗೆ ಪಡೆಯಲು ಸಿಎಂ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಮಾತುಕತೆ ನಡೆಸಿ ನಂತರ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದಾರೆ.Body:prashanth kumarConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.