ETV Bharat / city

ರಾಜ್ಯದಲ್ಲಿ ಮುದುಡುತ್ತಿರುವ ಕಮಲ: ಬಿಎಸ್​ವೈಗೆ ಮತ್ತಷ್ಟು ಪವರ್ ನೀಡಲು ಹೈಕಮಾಂಡ್ ಚಿತ್ತ..?

author img

By

Published : Dec 16, 2021, 6:55 PM IST

ಯಡಿಯೂರಪ್ಪ ನಾಯಕತ್ವದಲ್ಲಿ ಎದುರಿಸಿದ್ದ ಎಲ್ಲ ಉಪ ಚುನಾವಣೆಗಳಲ್ಲಿ ಪ್ರಚಂಡ ಗೆಲುವು ಪಡೆದಿದ್ದ ಬಿಜೆಪಿ ಈಗ ನಾಯಕತ್ವ ಬದಲಾದ ನಂತರ ಬಲ ಕಳೆದುಕೊಳ್ಳುವತ್ತ ಸಾಗುತ್ತಿದೆ. ಪ್ರಯಾಸದ ಗೆಲುವು ಹಾಗೂ ಸೋಲುಗಳು ಎದುರಾಗುತ್ತಿವೆ. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ಹೈಕಮಾಂಡ್ ಇದೀಗ ಮತ್ತೆ ಯಡಿಯೂರಪ್ಪ ಅವರಿಗೆ ಮಣೆ ಹಾಕಿ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಬೇಕು ಎನ್ನುವ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

BSY
ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಂತರ ಬಿಜೆಪಿ ನಿಧಾನವಾಗಿ ನೆಲೆ ಕಳೆದುಕೊಳ್ಳುವತ್ತ ಸಾಗುತ್ತಿರುವ ಚಿತ್ರಣ ಕಂಡು ಬರುತ್ತಿದ್ದು, ಕೇಸರಿ ಪಡೆಗೆ ಮತ್ತೆ ಶಕ್ತಿ ತುಂಬಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕಮಾಂಡ್ ಒಂದಷ್ಟು ಅಧಿಕಾರ ನೀಡಿ ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನೀಡಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ನಂತರ ರಾಜ್ಯದಲ್ಲಿ ನಡೆದ ಬಹುತೇಕ ಉಪ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಬಿಜೆಪಿ ಇತ್ತೀಚೆಗೆ ಸೋಲುಗಳನ್ನು ಕಾಣಲು ಶುರುಮಾಡಿದೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಪ್ರಯಾಸದ ಗೆಲುವು ಪಡೆದಿದ್ದ ಬಿಜೆಪಿ ನಾಯಕತ್ವ ಬದಲಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ಮತ್ತಷ್ಟು ಸೊರಗುತ್ತಿರುವುದು ಸ್ಪಷ್ಟವಾಗಿದೆ.

ಮುಖ್ಯಮಂತ್ರಿಗಳ ತವರು ಜಿಲ್ಲೆಯ ಹಾನಗಲ್ ಉಪ ಸಮರದಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳದೇ ಸೋಲು ಕಂಡಿದ್ದು ಒಂದೆಡೆಯಾದರೆ, ವಿಧಾನ ಪರಿಷತ್​ನ 25 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕೇವಲ 11 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. 15 ಸ್ಥಾನ ನಿರೀಕ್ಷಿಸಿದ್ದ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿಯಲ್ಲಿಯೇ ಪಕ್ಷದ ಅಭ್ಯರ್ಥಿ ಸೋತಿರುವುದು ದೊಡ್ಡ ಮುಜುಗರಕ್ಕೂ ಕಾರಣವಾಗಿದೆ.

ಯಡಿಯೂರಪ್ಪ ನಾಯಕತ್ವದಲ್ಲಿ ಎದುರಿಸಿದ್ದ ಎಲ್ಲ ಉಪ ಚುನಾವಣೆಗಳಲ್ಲಿ ಪ್ರಚಂಡ ಗೆಲುವು ಪಡೆದಿದ್ದ ಬಿಜೆಪಿ ಈಗ ನಾಯಕತ್ವ ಬದಲಾದ ನಂತರ ಬಲ ಕಳೆದುಕೊಳ್ಳುವತ್ತ ಸಾಗುತ್ತಿದೆ. ಪ್ರಯಾಸದ ಗೆಲುವು ಹಾಗೂ ಸೋಲುಗಳು ಎದುರಾಗುತ್ತಿವೆ.

ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ಹೈಕಮಾಂಡ್ ಇದೀಗ ಮತ್ತೆ ಯಡಿಯೂರಪ್ಪ ಅವರಿಗೆ ಮಣೆ ಹಾಕಿ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಬೇಕು ಎನ್ನುವ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಯಡಿಯೂರಪ್ಪನ್ನು ನಿರ್ಲಕ್ಷಿಸಿದಲ್ಲಿ ಪಕ್ಷಕ್ಕೆ ಹೆಚ್ಚಿನ ನಷ್ಟ

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ವೇಳೆ ಯಡಿಯೂರಪ್ಪ ಅವರನ್ನು ಕಡೆಗಣಿಸಿ ಕಡೆ ಕ್ಷಣದಲ್ಲಿ ಪ್ರಚಾರಕ್ಕೆ ಬರುವಂತೆ ಮನವಿ ಮಾಡಲಾಗಿತ್ತು. ಅದಕ್ಕೆ ಒಪ್ಪಿದ್ದ ಯಡಿಯೂರಪ್ಪ ಹಾನಗಲ್​ಗೆ ಹೋದರೂ ಸಿಂದಗಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು. ಪರಿಣಾಮ ಹಾನಗಲ್ ನಲ್ಲಿ ಬಿಜೆಪಿಗೆ ಸೋಲಾಗಿತ್ತು. ಇದು ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಿದಲ್ಲಿ ಪಕ್ಷಕ್ಕೆ ಹೆಚ್ಚಿನ ನಷ್ಟವಾಗಲಿದೆ ಎನ್ನುವುದಕ್ಕೆ ಪುರಾವೆ ಒದಗಿಸಿದಂತಿತ್ತು.

ಬಳಿಕ ಆ ತಪ್ಪು ಸರಿಪಡಿಸಿಕೊಂಡಿದ್ದು, ಪರಿಷತ್ ಅಖಾಡದಲ್ಲಿ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಯಿತು. ಯಡಿಯೂರಪ್ಪ ಆದ್ಯತೆ ನೀಡಿದ ಸ್ಥಳದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ತವರು ಜಿಲ್ಲೆಯನ್ನು ಮರಳಿ ವಶಪಡಿಸಿಕೊಳ್ಳುವಲ್ಲಿ ಯಡಿಯೂರಪ್ಪ ಸಫಲರಾಗಿದ್ದಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವಕ್ಕೆ ಪರಿಷತ್ ಚುನಾವಣೆಯಲ್ಲೂ ಪೂರ್ಣಪ್ರಮಾಣದ ಯಶಸ್ಸು ಸಿಕ್ಕಿಲ್ಲ. ಸ್ಥಾನ ಹೆಚ್ಚಿಸಿಕೊಂಡರೂ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ರಂಗನಾಥ ಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ BSY ಭೇಟಿ.. ವಿಶೇಷ ಪೂಜೆ

ಈ ಎಲ್ಲಾ ಅಂಶಗಳನ್ನು ಅವಲೋಕಿಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯದಲ್ಲಿ ಯಡಿಯೂರಪ್ಪ ಅವರ ಮಾಸ್ ಇಮೇಜ್ ಬಿಟ್ಟು ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ ಎನ್ನುವುದನ್ನು ಮನಗಂಡಿದ್ದು, ಯಡಿಯೂರಪ್ಪ ಅವರಿಗೆ ಹೆಚ್ಚಿನ ಆದ್ಯತೆಯನ್ನು ಮರಳಿ ನೀಡುವ ಚಿಂತನೆ ನಡೆಸಿದೆ. ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪ ಅವರ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂಬ ಚಿಂತನೆ ನಡೆಸಿದೆ.

ಜಬಾಬ್ದಾರಿಗಳ ಹಂಚಿಕೆಯಲ್ಲಿಯೂ ಯಡಿಯೂರಪ್ಪರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು, ಅವರು ರಾಜ್ಯ ಪ್ರವಾಸಕ್ಕೆ ಮುಂದಾದಲ್ಲಿ ಅದಕ್ಕೆ ಅಡ್ಡಿಪಡಿಸದೇ ಸಹಕರಿಸಬೇಕು ಎನ್ನುವ ಸೂಚನೆಯನ್ನು ರಾಜ್ಯ ನಾಯಕರಿಗೆ ನೀಡಲು ಹೈಕಮಾಂಡ್ ಚಿಂತಿಸಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು ಪಕ್ಷ ಸಂಘಟನೆ ಮಾಡುತ್ತೇವೆ, ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುತ್ತೇವೆ ಎಂದು ಕೆಲ ನಾಯಕರು ಹೊರಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ಯಡಿಯೂರಪ್ಪ ವಿರುದ್ಧ ಸದಾ ಕತ್ತಿ ಬೀಸುತ್ತಲೇ ಇದೆ. ಇದಕ್ಕೆಲ್ಲಾ ಈಗ ಹೈಕಮಾಂಡ್ ಒಂದು ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ.

ಯಡಿಯೂರಪ್ಪ ಮಾರ್ಗದರ್ಶನದಲ್ಲಿಯೇ ಪಕ್ಷ ಸಂಘಟನೆಯಾಗಲಿ ಎನ್ನುವ ಫರ್ಮಾನು ಹೊರಡಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಬೊಮ್ಮಾಯಿ - ಬಿಎಸ್​ವೈ ಭೇಟಿ

ಕಾಶಿ ಯಾತ್ರೆಯಿಂದ ಬೆಳಗಾವಿಗೆ ವಾಪಸ್​ ಆಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಪ್ರಧಾನಿ ಮೋದಿ ಭೇಟಿ ಮಾಡಿದ್ದ ಸಿಎಂ ಅವರೊಂದಿಗೆ ಚರ್ಚೆಯ ನಂತರ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿರುವುದು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪರನ್ನು ವಿಶ್ವಾಸಕ್ಕೆ ಪಡೆದುಕೊಂಡು ಮುನ್ನಡೆಯುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ ಎನ್ನುವುದಕ್ಕೆ ನಿದರ್ಶನ ಎನ್ನಲಾಗುತ್ತಿದೆ.

ಹೈಕಮಾಂಡ್ ನೀಡಿದ ಸಂದೇಶದ ಕುರಿತು ಸಿಎಂ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದು, ಸದ್ಯಕ್ಕೆ ಈ ವಿಚಾರದಲ್ಲಿ ಉಭಯ ನಾಯಕರು ಯಾವುದೇ ಗುಟ್ಟು ಬಿಟ್ಟು ಕೊಡದೇ ಇರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.