ಬೆಂಗಳೂರು : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ 3 ದಿನಗಳ ರಾಜ್ಯ ಪ್ರವಾಸದ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಸಂಜೆ 6.40ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ದಾವಣಗೆರೆಗೆ ತೆರಳಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಶನಿವಾರ ಬೆಳಗ್ಗೆ ದಾವಣಗೆರೆಯಲ್ಲಿ ವಿಭಾಗೀಯ ಪ್ರಭಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಹಾಗೂ ಸಂಜೆ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ. ಬಳಿಕ ರಾಜ್ಯ ಕೋರ್ ಕಮಿಟಿ ಸದಸ್ಯರ ಜೊತೆ ಚರ್ಚೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ಸೆ.19ರಂದು ಬೆಳಗ್ಗೆ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಬೆಂಗಳೂರಿನಿಂದ ಸಂಜೆ ದೆಹಲಿಗೆ ಹಿಂತಿರುಗಲಿದ್ದಾರೆ.