ಬೆಂಗಳೂರು: ಕೋವಿಡ್-19, ನೆರೆ ಸಂಕಷ್ಟದ ನಡುವೆಯೂ ರಾಜ್ಯದ ಆರ್ಥಿಕ ಚೇತರಿಕೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಅನೇಕ ಜನಪರ ಯೋಜನೆಗಳ ಜೊತೆ ಜನಸ್ನೇಹಿ ಆಡಳಿತವನ್ನು ಯಶಸ್ವಿಯಾಗಿ ನೀಡುತ್ತಿದ್ದರೂ ಕಾಂಗ್ರೆಸ್ ಮಾತ್ರ ತನ್ನ ರಾಜಕೀಯ ಲಾಭಕ್ಕಾಗಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಜನಧ್ವನಿ ಘೋಷಣೆಯಡಿ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಕೋವಿಡ್-19 ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಇಲ್ಲ, ಧ್ವನಿಯೂ ಇಲ್ಲವಾಗಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಫಲವಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ, ಪ್ರತಿಭಟನೆಯನ್ನು ಮಾಡಲಿ ಆದರೆ ಸುಳ್ಳು ಪ್ರಚಾರ ಮಾಡಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿರುವುದು ಖಂಡನೀಯ ಎಂದು ಟೀಕಿಸಿದರು.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ರೈತರಲ್ಲದ ಯಾರು ಬೇಕಾದರೂ ಕೃಷಿ ಭೂಮಿ ಖರೀದಿ ಮಾಡಬಹುದಾಗಿದೆ. ಕೃಷಿ ಚಟುವಟಿಕೆ ಬೆಳವಣಿಗೆ ಕೈಗಾರಿಕೆಗಳ ಬೆಳವಣಿಗೆಗೆ ಇದು ಸಹಕಾರಿಯಾಗಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಇದರಿಂದ ರೈತರು ತಮಗೆ ಬೇಕಾದ ಕಡೆ ಬೇಕಾದ ದರಕ್ಕೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ. ಕಾರ್ಮಿಕ ತಿದ್ದುಪಡಿ ಕಾಯ್ದೆಗೆ ಕಾರ್ಮಿಕ ಸ್ನೇಹಿ ಹಾಗೂ ಮಾಲೀಕರ ಸ್ನೇಹಿಯಾಗಲು ತಿದ್ದುಪಡಿಯನ್ನು ಮಾಡಿ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2272 ಕೋಟಿ ರೂ.ಗಳ ವಿಶೇಷ ಆರ್ಥಿಕ ಪ್ಯಾಕೇಜನ್ನು ಘೋಷಣೆ ಮಾಡಿದೆ. ನೆರೆ ಹಾವಳಿಗೆ ಪರಿಹಾರ ಕಾರ್ಯಾಚರಣೆಯನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಜನ-ಜಾನುವಾರು ಪ್ರಾಣಹಾನಿಗೆ ಪರಿಹಾರ. ಸೂರು ಕಳೆದುಕೊಂಡವರಿಗೆ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಸ್ತುವಾರಿ ಸಚಿವರು ಈಗಾಗಲೇ ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದಾರೆ. ಪ್ರಧಾನಿ ಜೊತೆ ಚರ್ಚಿಸಿ ರಾಜ್ಯಕ್ಕೆ ಸಿಗಬೇಕಾದ ಅಗತ್ಯ ನೆರವಿನ ಸಹಾಯಕ್ಕೆ ಸರ್ಕಾರ ಮನವಿ ಮಾಡಿದೆ. ಆದರೂ ಕಾಂಗ್ರೆಸ್ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ದೂರಿದರು.
ಕಾಂಗ್ರೆಸ್ ಪಕ್ಷಕ್ಕೆ ಜನರು ಇಲ್ಲ, ಧ್ವನಿಯೂ ಇಲ್ಲ: ರವಿಕುಮಾರ್ - ಕಾಂಗ್ರೆಸ್ ಪ್ರತಿಭಟನ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಇಲ್ಲ, ಧ್ವನಿಯೂ ಇಲ್ಲವಾಗಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಫಲವಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ, ಪ್ರತಿಭಟನೆಯನ್ನು ಮಾಡಲಿ ಆದರೆ ಸುಳ್ಳು ಪ್ರಚಾರ ಮಾಡಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿರುವುದು ಖಂಡನೀಯ - ರವಿಕುಮಾರ್