ETV Bharat / city

ಪ್ರಶಸ್ತಿ ಘೋಷಿಸಿದ ದಿನವೇ ಹಾಲ್ದೊಡ್ಡೇರಿ ನಿಧನ: ಅಭಿನಂದನೆ ಬದಲು ಸಂತಾಪ ಸೂಚಿಸಿದ ಬಿಜೆಪಿ ನಾಯಕರು - Dr. Sudhindra Haldodderi death

ಇಂದು ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಪ್ರಶಸ್ತಿ ಘೋಷಿಸಿದ ದಿನವೇ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್​​​​ಡಿಒ) ಮಾಜಿ ವಿಜ್ಞಾನಿ ಮತ್ತು ಎಚ್‍ಎಎಲ್‍ನ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ.

ಹಾಲ್ದೊಡ್ಡೇರಿ
Dr. Sudhindra Haldodderi
author img

By

Published : Jul 2, 2021, 5:24 PM IST

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಿಲಾಗಿತ್ತು. ಆದ್ರೆ, ಪ್ರಶಸ್ತಿ ಘೋಷಿಸಿದ ದಿನವೇ ಹಾಲ್ದೊಡ್ಡೇರಿ ನಿಧನರಾಗಿದ್ದು ದುರಾದೃಷ್ಟಕರ ಸಂಗತಿ ಎಂದು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದು, ಹಾಲ್ದೊಡ್ಡೇರಿ ನಿಧನಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ, ವಿಜ್ಞಾನ ಸಾಹಿತ್ಯಕ್ಕೆ ಅವರ ಕೊಡುಗೆ ಅನನ್ಯವಾದದ್ದು, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು. ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಇಂದು ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಹಾಲ್ದೊಡ್ಡೇರಿ ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ. ಅಭಿನಂದನೆ ತಿಳಿಸಬೇಕಾದ ಸಂದರ್ಭದಲ್ಲಿ ಸಂತಾಪ ಸೂಚಿಸುತ್ತಿರುವುದು ಸಂಕಟ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಬೇಸರದ ನುಡಿಗಳನ್ನಾಡಿದ್ದಾರೆ.

  • ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ, pic.twitter.com/1T5LMzwmj5

    — K S Eshwarappa (@ikseshwarappa) July 2, 2021 " class="align-text-top noRightClick twitterSection" data=" ">

ಇದನ್ನೂ ಓದಿ: DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಅಕ್ಷರ ಲೋಕದ ಅತ್ಯುತ್ತಮ ಲೇಖಕ: ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ 22 ವರ್ಷ ಸೇವೆ ಸಲ್ಲಿಸಿದ್ದ ಹಾಲ್ದೊಡ್ಡೇರಿ ನಂತರ ಸ್ವಯಂ ನಿವೃತ್ತಿ ಪಡೆದು ಜೈನ್ ವಿಶ್ವವಿದ್ಯಾಲಯದಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಬರೆಯುವ ಕಲೆ ಅವರಿಗೆ ಕರಗತವಾಗಿತ್ತು. ಅವರ ನಿಧನದಿಂದ ಕನ್ನಡ ಅಕ್ಷರ ಲೋಕ ಒಬ್ಬ ಅತ್ಯುತ್ತಮ ಲೇಖಕರನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

  • ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. 1/2 pic.twitter.com/eVKpCSqbpG

    — Aravind Limbavali (@ArvindLBJP) July 2, 2021 " class="align-text-top noRightClick twitterSection" data=" ">

ಸಂತಾಪ ಸೂಚಿಸಿದ ನಳಿನ್​ ಕುಮಾರ್ ಕಟೀಲ್: ಸುಧೀಂದ್ರ ಅವರು ಹಲವಾರು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿ ಸುಪ್ರಸಿದ್ಧರಾಗಿದ್ದರು. ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.