ಬೆಂಗಳೂರು: ಪ್ರತಿ ಗುರುವಾರ ಮುಖ್ಯಮಂತ್ರಿಗಳು ಶಾಸಕರ ಕುಂದು ಕೊರತೆ, ಅಹವಾಲು ಆಲಿಸಬೇಕು,ಅಧಿವೇಶನ ನಡೆಯುವಾಗ ಪ್ರತಿ ಮಂಗಳವಾರ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು, ಪ್ರಸಕ್ತ ವಿಧಾನಸಭೆ ಅಧಿವೇಶನದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು ಎನ್ನುವ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಳ್ಳಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಂಜೆ 6.30 ಕ್ಕೆ ನಿಗದಿಯಾಗಿದ್ದ ಸಭೆ ಸಿಎಂ ಗುಜರಾತ್ ಪ್ರವಾಸದ ಕಾರಣದಿಂದ 7.30 ಕ್ಕೆ ಆರಂಭವಾಯಿತು. ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಶಾಸಕರು ಸಭೆಯಲ್ಲಿ ಹಾಜರಿದ್ದರು, ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಸಭೆಯಲ್ಲಿ ಹಾಜರಿದ್ದರು.
ಶಾಸಕಾಂಗ ಪಕ್ಷದ ಸಭೆ ಆರಂಭಗೊಳ್ಳುತ್ತಿದ್ದಂತೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧವನ್ನು ಒಗ್ಗಟ್ಟಿನನಿಂದ ಎದುರಿಸಲು ಸರ್ಕಾರಕ್ಕೆ ಎಲ್ಲರು ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಶಾಸಕರು ಹಾಗೂ ಸಚಿವರಿಗೆ ಮನವಿ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅಧಿವೇಶನದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ, ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಶಾಸಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಈ ಅಧಿವೇಶನದಲ್ಲಿ ಮಂಡನೆಯಾಗುತ್ತಿರುವ ವಿಧೇಯಕಗಳ ಬಗ್ಗೆ ಶಾಸಕರಿಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದ್ದು, ಡೀಮ್‌ಡ್ ಫಾರೆಸ್ಟ್ ಹಾಗೂ ಇ-ಸ್ವತ್ತು ವಿಧೇಯಕಗಳ ಬಗ್ಗೆ ಶಾಸಕರು ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ಕಾಯ್ದೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕರ ಅಹವಾಲು ಕೇಳಲು ಪ್ರತೀ ಗುರುವಾರ ಸಿಎಂ ಸಮಯ ನಿಗದಿಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಎಂ ಅವರು ಪ್ರತೀ ಗುರುವಾರ ಶಾಸಕರ ಅಹವಾಲು ಕೇಳಲಿದ್ದಾರೆ. ಪ್ರತೀ ಗುರುವಾರ ಶಾಸಕರು ಸಿಎಂ ಭೇಟಿ ಮಾಡಿ ಮನವಿ, ಅಹವಾಲು ಕೊಡಬಹುದು. ನಗರದ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸಲು ಒಂದೇ ಯೋಜನಾ ಸಮಿತಿ ಮಾಡಲು ಚರ್ಚೆ ನಡೆಸಲಾಗಿದೆ. ಒಂದೇ ಇಲಾಖೆಯಡಿ ನಗರದ ಯೋಜನೆಗಳನ್ನು ತರುವ ಬಗ್ಗೆ, ವಿಧೇಯಕ ತರುವ ಬಗ್ಗೆ ಚರ್ಚೆ ಆಯಿತು. ಶಿಕ್ಷಕರ ವರ್ಗಾವಣೆ ಸಂಬಂಧ ತಿದ್ದುಪಡಿ ವಿಧೇಯಕ ಬಗ್ಗೆಯೂ ಚರ್ಚೆ ಆಗಿದೆ. ವಿಧೇಯಕಗಳ ವಿಚಾರದಲ್ಲಿ ಶಾಸಕರ ಗೊಂದಲದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಅಧಿವೇಶನದಲ್ಲಿ ಹೇಗೆ ನಿಭಾಯಿಸಬೇಕು ಅಂತ ಚರ್ಚೆ ಆಗಿದೆ. ಶಾಸನ ಸಭೆಯಲ್ಲಿ ಬರಬಹುದಾದ ವಿಧೇಕಗಳ ಬಗ್ಗೆ ಅನುಮಾನಗಳನ್ನು ಬಗೆಹರಿಸಿಕೊಳ್ಳಲಾಗಿದೆ. ಶಾಸನ ಸಭೆಗಳಲ್ಲಿ ಎಲ್ಲರೂ ಭಾಗವಹಿಸಲು ಸೂಚಿಸಲಾಗಿದೆ. ಅಧಿವೇಶನ ವೇಳೆ ಪ್ರತೀ ಮಂಗಳವಾರ ಪಕ್ಷದ ಶಾಸಕಾಂಗ ಸಭೆ ಕರೆಯಲು ನಿರ್ಧಾರಿಸಲಾಗಿದ್ದು, ಬೆಳಗ್ಗೆ 9.30 ರಿಂದ 11 ರೊಳಗೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ಮಂಗಳವಾರ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ ಎಂದರು.
ಆನ್‌ಲೈನ್ ಗ್ಯಾಂಬ್ಲಿಂಗ್ ತಡೆ ವಿಧೇಯಕ, ಜಿ.ಪಂ., ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಆಯೋಗವೇ ಮೀಸಲಾತಿ ಹಂಚಿಕೆಯೂ ಮಾಡಲಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಒಬ್ಬರನ್ನು ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲು ಚಿಂತನೆ ನಡೆಸಲಾಗಿದೆ. ಜೈಲುಗಳ ಸುಧಾರಣೆ ಬಗ್ಗೆ ಚರ್ಚೆ ಆಗಿದೆ ಎಂದರು.
ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದ್ದರೆ ಶಾಸಕಾಂಗ ಪಕ್ಷದ ಸಭೆಯಲ್ಲೇ ಚರ್ಚಿಸಲು ನಿರ್ಧಾರಿಸಲಾಗಿದೆ. ಶಾಸಕರು ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಲು ಸೂಚಿಸಲಾಗಿದೆ. ಶಾಸಕರ ಕ್ಷೇತ್ರ, ಅನುದಾನ ಸಮಸ್ಯೆ ಬಗ್ಗೆ ಚರ್ಚೆ ಆಗಲಿಲ್ಲ ಎಂದರು.
ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ:
ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಪಾಲಿಕೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುವ ವಿಶ್ವಾಸ ಇದೆ ಎಂದು ಮಾಧುಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.
ಪ್ರತಿ ಗುರುವಾರ ಸಿಎಂ ಶಾಸಕರ ಕುಂದು ಕೊರತೆ ಆಲಿಸಬೇಕು; ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ..! - CM Basavarajy Bommai
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅಧಿವೇಶನದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ, ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಶಾಸಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.