ETV Bharat / city

ಪರಿಷತ್ ಚುನಾವಣೆ ಗಂಭೀರವಾಗಿ ಪರಿಗಣಿಸಿದ್ದೇವೆ, ಗೆಲ್ಲುವ ನಿರ್ಣಯವಾಗಿದೆ: ಕ್ಯಾ.ಗಣೇಶ್ ಕಾರ್ಣಿಕ್

ಪ್ರಚಲಿತ ವಿದ್ಯಮಾನ ಹಾಗೂ ಮುಂಬರುವ ಚುನಾವಣೆ ಬಗ್ಗೆ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವಿಧಾನ ಪರಿಷತ್ ಚುನಾವಣೆ, ಬಿಬಿಎಂಪಿ ಸೇರಿದಂತೆ ಮುಂಬರಲಿರುವ ಎಲ್ಲಾ ಚುನಾವಣೆಗಳನ್ನು ಪಕ್ಷ ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲ್ಲುವ ಎಲ್ಲ ಪ್ರಯತ್ನ ಮಾಡಬೇಕು ಎಂದು ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್
ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್
author img

By

Published : Nov 9, 2021, 4:17 PM IST

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ, ಬಿಬಿಎಂಪಿ ಸೇರಿದಂತೆ ಮುಂಬರಲಿರುವ ಎಲ್ಲಾ ಚುನಾವಣೆಗಳನ್ನು ಪಕ್ಷ ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲ್ಲುವ ಎಲ್ಲ ಪ್ರಯತ್ನ ಮಾಡಬೇಕು ಎಂದು ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿ.ಟಿ.ರವಿ, ಡಿ.ಎ.ಅರುಣ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಪ್ರಚಲಿತ ವಿದ್ಯಮಾನ ಹಾಗೂ ಮುಂಬರುವ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದೆ. ಪರಿಷತ್ ಚುನಾವಣೆ ನಂತರ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಬಿಬಿಎಂಪಿ ಚುನಾವಣೆ ಚುನಾವಣೆ ಕೂಡ ಬರಲಿದೆ. ಅದಕ್ಕೆ ಸಿದ್ದತೆ ನಡೆಸುವ ಕುರಿತು ಚರ್ಚಿಸಲಾಗಿದೆ ಎಂದರು.

ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದ ತಿಳಿಸಲಾಗಿದೆ. ಸಂಘಟನಾತ್ಮಕ ಚಟುವಟಿಕೆ ಮತ್ತು ವರದಿ ಸ್ವೀಕರಿಸಲಾಗಿದೆ. ರಾಜ್ಯಾದ್ಯಂತ ಪಕ್ಷದ ಚಟುವಟಿಕೆ ಬಗ್ಗೆ ಸಮಗ್ರ ಚರ್ಚೆ ಮಾಡಲಾಗಿದೆ. ಪರಿಷತ್ ಚುನಾವಣೆ ನಿಮಿತ್ತ ಜನಸ್ವರಾಜ್ ಯಾತ್ರೆ ಇದ್ದು, ನಾಲ್ಕು ತಂಡ ಬೇರೆ ಬೇರೆಕಡೆ ಪ್ರವಾಸ ಮಾಡಲಿದೆ ಆದರೆ ಚುನಾವಣಾ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಯಾತ್ರೆ ದಿನಾಂಕ ಮಾರ್ಪಡಿಸಿದ್ದು ನವೆಂಬರ್ 18 ರಿಂದ 21 ರವರೆಗೆ ನಡೆಯಲಿದೆ.ನಾಲ್ಕು ದಿನಗಳ ವಿಸ್ತೃತ ಪ್ರವಾಸ ಕೈಗೊಳ್ಳಲಾಗುತ್ತದೆ. ಇದರ ಯಶಸ್ವಿಗೆ ಮಂಡಲ ತಂಡ ತೊಡಗಿಸಿ ಕೊಳ್ಳಬೇಕು ಎನ್ನುವ ಸೂಚನೆ ನೀಡಲಾಯಿತು ಎಂದು ಹೇಳಿದರು.

ನಾಮಫಲಕ ಅನಾವರಣ, ಬೂತ್ ಮಟ್ಟದ ಕಾರ್ಯಕ್ರಮ, ಸೇವಾ ಹೀ ಸಂಘಟನ್ ಕಾರ್ಯಕ್ರಮ ಮುಂದುವರೆಸುವುದು. ಕಾಪ್ಸ್ 26 ಸಮ್ಮಿಟ್ ಸಭೆ ನಡೆದಿದ್ದು, ಪ್ರಧಾನಿ ಅವರಿಗೆ ಧನ್ಯವಾದ ಹೇಳಲಾಯಿತು. ಜಗತ್ತಿನಲ್ಲಿ ನೂರು ಕೋಟಿ ಲಸಿಕೆ ನೀಡಿದ್ದು, 94% ಉಚಿತ ವ್ಯಾಕ್ಸಿನ್ ನೀಡಲಾಗಿದೆ.ಇದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಲಾಯಿತು ಎಂದರು.

ರಾಷ್ಟ್ರ ಮಟ್ಟದ ಕಾರ್ಯಕ್ರಮ ಕಮಲ ಪುಷ್ಪ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಕಾರ್ಯಕರ್ತರನ್ನ ಗುರ್ತಿಸಿಕೊಂಡು ತಂಡ ರೂಪಿಸಲಾಗಿದೆ. ಕರ್ನಾಟಕಕ್ಕೆ 9 ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಹಾಜಬ್ಬ, ತುಳಸಿಗೌಡ ಅವರನ್ನ ಗುರ್ತಿಸಿದ್ದು, ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಯಿತು ಎಂದು ತಿಳಿಸಿದರು.

ನಮಗೆ ಮೊದಲು ಬರುವುದು ವಿಧಾನಪರಿಷತ್ ಚುನಾವಣೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಪ್ರತಿನಿಧಿಗಳ ಮೂಲಕ ಚುನಾವಣೆ ನಡೆಯಲಿದೆ ಹಾಗಾಗಿ ಅವರನ್ನು ಸಂಪರ್ಕಿಸಿ ಪ್ರತಿಗ್ರಾಮಪಂಚಾಯತಿ ಮಟ್ಟದಲ್ಲಿ ಸರ್ಕಾರ ಏನೆಲ್ಲಾ ಕೆಲಸಗಳನ್ನು ಮಾಡಿದೆ ಎನ್ನುವ ಪಟ್ಟಿ ಮಾಡಿಕೊಂಡು ಅವರಿಗೆ ತಿಳಿಸಿ ಯಾವ ಕಾರಣಕ್ಕೆ ನಮ್ಮನ್ನು ಬೆಂಬಲಿಸಬೇಕು ಎನ್ನುವುದನ್ನು ತಿಳಿಸಲಾಗುತ್ತದೆ.ಗ್ರಾಮ ಪಂಚಾಯತ್ ನಲ್ಲಿ ಶೇ.80 ರಷ್ಟು ಬಿಜೆಪಿ ಬೆಂಬಲಿತ ಸದಸ್ಯರು ಗೆದ್ದಿದ್ದು ಪರಿಷತ್ ಚುನಾವಣೆಯಲ್ಲು ಹೆಚ್ಚಿನ ಸ್ಥಾನ ಗೆಲ್ಲಲು ನಿರ್ಧರಿಸಿದ್ದೇವೆ ಎಂದರು.

ಪರಿಷತ್ ಚುನಾವಣೆ ನಂತರ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆ ವೇಳೆ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಈ ವ್ಯಾಪ್ತಿಯಲ್ಲಿ ನಮ್ಮ ಸರ್ಕಾರ ಏನು ಮಾಡಿದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಏನು ಮಾಡಿದೆ ಎಂದು ತಿಳಿಸಿ ಅಭಿವೃದ್ಧಿ ಆಧಾರದಲ್ಲಿ ಗೆಲ್ಲುವ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದಲ್ಲಿ ನಾವು ಈ ಚುನಾವಣೆಯನ್ನು ಎದುರಿಸುತ್ತೇವೆ. ಮೇಕೆದಾಟು ಬಗ್ಗೆ ಈಗ ಮಾತನಾಡುವ ಕಾಂಗ್ರೆಸ್ ಐದು ವರ್ಷಗಳ ಕಾಲ ಸರ್ಕಾರವಿದ್ದಾಗ ಏಕೆ ಮಾಡಲಿಲ್ಲ? ಈಗ ಪಾದಯಾತ್ರೆ ಮಾಡಿ ಏನು ಉಪಯೋಗ? ಜನ ಅದನ್ನು ಅರ್ಥ ಮಾಡಿಕೊಳ್ಳುತ್ತಾರೆ ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಬಹಳ ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ ಅವರ ಮಾತಿನಲ್ಲಿ ಪಕ್ಷಕ್ಕೂ ನಂಬಿಕೆಯಿದೆ ಎಂದರು.

ರಾಜ್ಯ ಕಾರ್ಯಕಾರಿಣಿ:

ಮೂರು ತಿಂಗಳಿಗೊಮ್ಮೆ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಬಾರಿಯ ಸಭೆ ಡಿಸೆಂಬರ್ 18 ಮತ್ತು 19 ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಕಾರ್ಣಿಕ್ ತಿಳಿಸಿದರು.

ಇದನ್ನೂ ಓದಿ: ಪಂಚಾಯತ್​ ರಾಜ್​ನಲ್ಲಿ ಕರ್ನಾಟಕ ಉತ್ತಮ ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.