ETV Bharat / city

ಭ್ರಷ್ಟಾಚಾರ ಆರೋಪಿತ ಐಎಎಸ್ ಅಧಿಕಾರಿ ಮಂಜುನಾಥ್‌ಗೆ ಮೂಡಿಗೆರೆ ಬಿಜೆಪಿ ಶಾಸಕರ ಬೆಂಬಲ

"ಐಎಎಸ್ ಅಧಿಕಾರಿ ಮಂಜುನಾಥ್ ಅವರು ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಕ್ಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಕೆಲವರು ಕುತಂತ್ರ ನಡೆಸಿದ್ದಾರೆ" ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ದೂರಿದರು.

ಕುಮಾರಸ್ವಾಮಿ
ಕುಮಾರಸ್ವಾಮಿ
author img

By

Published : Jul 8, 2022, 6:47 AM IST

ಬೆಂಗಳೂರು: ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲಂಚ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಗಂಭೀರ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿತ್ತು. ಈ ಕ್ರಮಕ್ಕೆ ಆಡಳಿತ ಪಕ್ಷ ಬಿಜೆಪಿಯ ಶಾಸಕರೂ ಆಗಿರುವ ಹಾಗು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಐಎಎಸ್ ಅಧಿಕಾರಿ ಮಂಜುನಾಥ್ ಅವರು ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಕ್ಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಕೆಲವರು ಕುತಂತ್ರ ನಡೆಸಿ ಅವರನ್ನು ಸಿಲುಕಿಸುವ ಷಡ್ಯಂತ್ರ ನಡೆಸಿರುವ ಸಾಧ್ಯತೆ ಇದೆ" ಎಂದು ತಿಳಿಸಿದ್ದಾರೆ.

"ಯಾರೋ ಮಾಡಿದ ತಪ್ಪಿಗಾಗಿ ಮಂಜುನಾಥ್ ಅವರನ್ನು ಎಸಿಬಿ ಬಂಧನ ಮಾಡಿರುವುದು ಸರಿಯಲ್ಲ. ಇತ್ತೀಚೆಗೆ ಹೈಕೋರ್ಟ್​ನ ನ್ಯಾಯಮೂರ್ತಿಗಳು ಎಸಿಬಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಚೇರಿಯ ಯಾರೋ ಸಿಬ್ಬಂದಿ ಮಾಡಿರುವ ತಪ್ಪನ್ನು ಗುರಿಯಾಗಿಸಿ ಜಿಲ್ಲಾಧಿಕಾರಿಯನ್ನು ಬಲಿ ಹಾಕಿರುವುದು ಎಷ್ಟರ ಮಟ್ಟಿಗೆ ಸರಿ?" ಎಂದು ಶಾಸಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

"ಭ್ರಷ್ಟಾಚಾರ ನಿಗ್ರಹ ದಳವು ಇದುವರೆಗೆ ಬೆಂಗಳೂರು ಸೇರಿದಂತೆ ಅನೇಕ ಕಡೆ ಭ್ರಷ್ಟಾಚಾರವೆಸಗಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಂಡಿದೆ ಎಂಬುದು ಪ್ರಶ್ನಾರ್ಹವಾಗಿದೆ. ಕೇವಲ ದುರ್ಬಲ ವರ್ಗಗಳ ಅಧಿಕಾರಿಗಳನ್ನು ಗುರಿಯಾಗಿಸಿ ದಾಳಿ ನಡೆಸಿ, ಅವರ ಮೇಲೆ ಕ್ರಮ ಕೈ ಗೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ?. ಇಡೀ ಸಾರ್ವಜನಿಕ ವಲಯವೇ ಎಸಿಬಿ ಕಾರ್ಯನಿರ್ವಹಣೆ ಕುರಿತು ಅಸಮಾಧಾನ ಹೊಂದಿದೆ" ಎಂದಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಕರಣ: ಬೆಂಗಳೂರು ಡಿಸಿಯಾಗಿದ್ದ ಮಂಜುನಾಥ್ ಅರೆಸ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.