ETV Bharat / city

ಹರ್ಷ ಹತ್ಯೆ, ಹಿಜಾಬ್ ಪ್ರಕರಣ ಎನ್ಐಎಗೆ ವಹಿಸಿ: ಸಿಎಂ ಮೇಲೆ ಬಿಜೆಪಿ ಶಾಸಕರ ಒತ್ತಡ

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಹಿಂದೂಪರ ಸಂಘಟನೆಗಳು ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿವೆ. ಇದೇ ವೇಳೆ, ಈ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಶಾಸಕರಾದ ಯತ್ನಾಳ್, ಹೆಚ್​.ವಿಶ್ವನಾಥ್ ಹಾಗು ರಘುಪತಿ ಭಟ್ ಅವರು ಸಿಎಂ ಮನವಿ ಮಾಡಿದ್ದಾರೆ.

cm bommai
ಸಿಎಂ ಬೊಮ್ಮಾಯಿ
author img

By

Published : Feb 24, 2022, 7:32 AM IST

ಬೆಂಗಳೂರು: ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಾಗೂ ಹಿಜಾಬ್ ಗದ್ದಲ ಪ್ರಕರಣದ ತನಿಖೆಯನ್ನು ‌ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ಒಪ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಸ್ವಪಕ್ಷೀಯ ಶಾಸಕರು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರ್.ಟಿ.ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದ್ದು, ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ವಿಚಾರದ ಕುರಿತು ಚರ್ಚಿಸಿದ್ದಾರೆ. ಈ ವೇಳೆ, ಟಾರ್ಗೆಟ್ ಆಗಿರುವ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಕೊಡುವ ಬಗ್ಗೆ ಮನವಿ ಮಾಡಿದರು. ಪ್ರಕರಣದ ಆರೋಪಿಗಳ ವಿಚಾರದಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿದರು‌. ಅಗತ್ಯವಿದ್ದಲ್ಲಿ ಎನ್ಐಎ ತನಿಖೆ ವಹಿಸುವಂತೆ ಮನವಿ ಮಾಡಿದರು.

ಯತ್ನಾಳ್ ಭೇಟಿ ನಂತರ ಸಿಎಂ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹಾಗೂ ಉಡುಪಿ ಶಾಸಕ ರಘುಪತಿ ಭಟ್ ಆಗಮಿಸಿದ್ದು, ಹಿಜಾಬ್ ಸಂಘರ್ಷ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಉಡುಪಿಯ ಶಾಲಾ ಕಾಲೇಜುಗಳ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದರು. ಹಿಜಾಬ್ ಪ್ರಕರಣವನ್ನು ಎನ್ಐಎಗೆ ವಹಿಸಲು ಮನವಿ ಮಾಡಿದರು.

ಇದನ್ನೂ ಓದಿ: ಹಿಜಾಬ್ ನಿರ್ಬಂಧ ವಿದ್ಯಾರ್ಥಿಗಳಿಗಷ್ಟೇ ಶಿಕ್ಷಕರಿಗಲ್ಲ: ಫೆ.10ರ ಆದೇಶಕ್ಕೆ ಸ್ಪಷ್ಟನೆ ನೀಡಿದ ಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.