ETV Bharat / city

ವಿವಾದದ ಬಳಿಕ 'ಹಿಂದೂ ಪುನರುಜ್ಜೀವನ'ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿದ್ದ 'ಹಿಂದೂ ಪುನರುಜ್ಜೀವನ'ದ ಹೇಳಿಕೆಗಳನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಿಂಪಡೆದಿರುವುದಾಗಿ ಟ್ವೀಟ್​ ಮಾಡಿದ್ದಾರೆ.

BJP MP Tejasvi Surya Withdraws Hindu Revival Remarks
ತೇಜಸ್ವಿ ಸೂರ್ಯ
author img

By

Published : Dec 27, 2021, 12:46 PM IST

ಬೆಂಗಳೂರು: 'ಮಾತೃ ಧರ್ಮ' ತೊರೆದವರನ್ನು ಹಿಂದೂ ಧರ್ಮಕ್ಕೆ ವಾಪಸ್​ ಕರೆತರಬೇಕು ಎಂದು ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರಾಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ಉಡುಪಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಭಾಷಣ

ಡಿಸೆಂಬರ್​ 25ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೇಜಸ್ವಿ ಸೂರ್ಯ, "ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಮುಸ್ಲಿಮರು ಹಾಗು ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ. ಹೀಗೆ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮದ ಪುನರುಜ್ಜೀವನ ಮಾಡಬೇಕು" ಎಂದು ಕರೆ ಕೊಟ್ಟಿದ್ದರು.

"ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳಷ್ಟು ಮತಾಂತರಗಳು ನಡೆದಿವೆ. ಅಸಾಧ್ಯ ಎಂಬುದು ಯಾವುದೂ ಇಲ್ಲ. ನಮ್ಮ ಮನೆ ಪಕ್ಕ, ಗ್ರಾಮ, ಊರುಗಳಲ್ಲಿ ಘರ್ ವಾಪಸಿ ಮಾಡಬೇಕು. ನಾವು ದೊಡ್ಡ ಕನಸು ಕಾಣಬೇಕು. ಈ ದೇಶದಲ್ಲಿ ರಾಮ ಮಂದಿರವನ್ನು ಸ್ಥಾಪನೆ ಮಾಡಿದ್ದೇವೆ. ಕಾಶ್ಮೀರದ 370ನೇ ವಿಧಿಯನ್ನು ತೆಗೆದು ಹಾಕಿದ್ದೇವೆ. ಪಾಕಿಸ್ತಾನದಲ್ಲಿ ಮತಾಂತರಗೊಂಡವರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು. ಮಠ, ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು" ಎಂದು ತೇಜಸ್ವಿ ಭಾಷಣ ಮಾಡಿದ್ದರು.

ಇದನ್ನೂ ಓದಿ: 'ಮತಾಂತರಗೊಂಡ ಜನರನ್ನು ವಾಪಸ್‌ ಹಿಂದೂ ಧರ್ಮಕ್ಕೆ ಕರೆತರುವ ಬಗ್ಗೆ ಮಠ-ಮಂದಿರಗಳಿಗೆ ಟಾರ್ಗೆಟ್‌ ಇರಬೇಕು'

ಇವರ ಈ ಹೇಳಿಕೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿತ್ತು. ಯುವ ಸಂಸದನ ಈ ಮಾತುಗಳನ್ನು ಖಂಡಿಸಿ ಅನೇಕರು ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ತೇಜಸ್ವಿ, "ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದ ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ನಾನು ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ" ಎಂದು ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.