ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಉಪ ಚುನಾವಣೆ ಗೆಲುವಿನ ಬಳಿಕ ಮೊದಲ ಬಾರಿಗೆ ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್, ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಕುತೂಹಲ ಹುಟ್ಟಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಹೈಕಮಾಂಡ್ ಭೇಟಿಗೆ ತೆರಳುವ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.