ETV Bharat / city

ರಾಜಸ್ಥಾನ ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ರಾಜಸ್ಥಾನದ ದಲಿತ ಬಾಲಕನ ಥಳಿತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ಯಾವುದೇ ಹೇಳಿಕೆ ಕೊಡದಿರುವುದು ಅವರ ದಲಿತವಿರೋಧಿ ನೀತಿಗೆ ಸ್ಪಷ್ಟ ಉದಾಹರಣೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

KN_BNG_03_BJP_PROTEST_AGIANST_RAJASTANA_CM_SCRIPT_7208080
ಛಲವಾದಿ ನಾರಾಯಣಸ್ವಾಮಿ
author img

By

Published : Aug 17, 2022, 6:21 PM IST

ಬೆಂಗಳೂರು: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹೋಟ್ ರಾಜೀನಾಮೆಗೆ ಆಗ್ರಹಿಸಿ ನಾಳೆ 11 ಗಂಟೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಕಾಂಗ್ರೆಸ್ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆಗಳು ನಡೆಯಲಿವೆ ಎಂದು ಅವರು ಹೇಳಿದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಮಡಕೆ ನೀರನ್ನು ಮುಟ್ಟಿದ ಬಾಲಕನನ್ನು ಅಧ್ಯಾಪಕನೊಬ್ಬ ತೀವ್ರವಾಗಿ ಥಳಿಸಿದ್ದು, ಆತ ಮೃತಪಟ್ಟಿರುವುದು ಹೃದಯವಿದ್ರಾವಕ ಘಟನೆ. ಈ ಕುರಿತು ಕಾಂಗ್ರೆಸ್‌ನವರು ಒಂದೇ ಒಂದು ಹೇಳಿಕೆಯನ್ನೂ ಕೊಡದಿರುವುದು ಅವರ ದಲಿತವಿರೋಧಿ ನೀತಿಗೆ ಸ್ಪಷ್ಟ ಉದಾಹರಣೆ. ರಾಜ್ಯದಲ್ಲಿ ಸಣ್ಣಪುಟ್ಟ ಘಟನೆಗೆ ತಕ್ಷಣ ಪ್ರತಿಕ್ರಿಯಿಸುವ ಕಾಂಗ್ರೆಸ್ ಮುಖಂಡರ ನಾಲಿಗೆ ಬಿದ್ದುಹೋಗಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯರಿಗೆ ತಾಕತ್ತಿದ್ದರೆ ರಾಜಸ್ಥಾನದ ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಬೇಕು ಎಂದು ಇದೇ ವೇಳೆ ಸವಾಲೆಸೆದರು. ಸಣ್ಣಸಣ್ಣ ವಿಚಾರಕ್ಕೂ ಬೊಮ್ಮಾಯಿಯವರ ರಾಜೀನಾಮೆ ಕೇಳುವ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಡಕೆ ನೀರು ಕುಡಿದಿದ್ದಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾದ ಬಾಲಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.