ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಮುತ್ಸದ್ಧಿ, ಅನುಭವಿ ರಾಜಕಾರಣಿ, ಹೋರಾಟಗಾರ ಎ.ಕೆ.ಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಅತ್ಯಂತ ನಿಷ್ಠುರ ರಾಜಕಾರಣಿ ಎ.ಕೆ.ಸುಬ್ಬಯ್ಯ ಅವರು, ಅನ್ಯಾಯದ ವಿರುದ್ಧ ಸದಾ ಹೋರಾಡಿದವರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.
ಹಿರಿಯ ರಾಜಕಾರಣಿ, ವಕೀಲ ಎ.ಕೆ. ಸುಬ್ಬಯ್ಯ ಇನ್ನಿಲ್ಲ
ಅವರ ನಿಧನದಿಂದ ರಾಜ್ಯ ಒಬ್ಬ ನೇರ, ಪ್ರಾಮಾಣಿಕ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.