ಬೆಂಗಳೂರು : ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಧೋರಣೆ ಎಂದು ಬಿಜೆಪಿ ಟಾಂಗ್ ನೀಡಿದೆ. ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಕುರಿತು ಮಾತನಾಡಿರುವ ಬಗ್ಗೆ ಟ್ವೀಟ್ ಮಾಡಿ, ಈ ಹಿಂದೆ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದ ಸಿದ್ದರಾಮಯ್ಯ ಅವರು ಈಗ ಸ್ವಾಮೀಜಿಗಳ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ. ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಹಿಂದೆಯೂ ಕೂಡ ಅವರು ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮ ಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು ಎಂದು ದೂರಿದೆ.
-
ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು.
— BJP Karnataka (@BJP4Karnataka) March 26, 2022 " class="align-text-top noRightClick twitterSection" data="
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ.#ಹಿಂದೂವಿರೋಧಿಬುರುಡೆರಾಮಯ್ಯ
">ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು.
— BJP Karnataka (@BJP4Karnataka) March 26, 2022
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ.#ಹಿಂದೂವಿರೋಧಿಬುರುಡೆರಾಮಯ್ಯಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು.
— BJP Karnataka (@BJP4Karnataka) March 26, 2022
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ.#ಹಿಂದೂವಿರೋಧಿಬುರುಡೆರಾಮಯ್ಯ
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ. ಬಿಎಸ್‌ವೈ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಮಠ-ಮಂದಿರಗಳಿಗೆ ಉದಾರ ನೆರವು ನೀಡಿದ್ದರು. ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದು ವಾದಿಸುವ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ವಿರೋಧಿಸಲು ಯಾವ ಕಾನೂನು ಅಡ್ಡಿ ಬರುವುದಿಲ್ಲ ಎಂದು ಟೀಕಿಸಿದೆ ಬಿಜೆಪಿ.
ಓದಿ: ಸಿದ್ದರಾಮಯ್ಯ ಸಣ್ಣ ಮಾತುಗಳನ್ನಾಡಿದ್ದಾರೆ, ತಕ್ಷಣ ಕ್ಷಮೆಯಾಚಿಸಬೇಕು: ರಂಭಾಪುರಿ ಶ್ರೀ!