ETV Bharat / city

ರಾಜ್ಯದ ಅಭಿವೃದ್ಧಿ ಗಮನಿಸಿ ಜನರು ಬಿಜೆಪಿಗೆ ಮತ ನೀಡಿದ್ದಾರೆ ; ನಳಿನ್ ಕುಮಾರ್ ಕಟೀಲ್

ಬಿಹಾರದಲ್ಲಿ ಎನ್‌ಡಿಎ ಉತ್ತಮ ಫಲಿತಾಂಶ ಬರಲು ಹಾಗೂ ಮಧ್ಯಪ್ರದೇಶ, ಗುಜರಾತ್, ತೆಲಂಗಾಣ ಸೇರಿ ದೇಶದ ಇತರ ಕಡೆಗಳಲ್ಲಿ ಉಪ ಚುನಾವಣೆಯಲ್ಲೂ ಗೆಲುವಿಗೆ ಪ್ರಧಾನಿ ಮೋದಿ ಅಭಿವೃದ್ಧಿಯ ಸಾಧನೆಯೇ ಕಾರಣ..

nalin kumar kateel
ನಳಿನ್ ಕುಮಾರ್ ಕಟೀಲ್
author img

By

Published : Nov 10, 2020, 8:43 PM IST

ಬೆಂಗಳೂರು : ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮತದಾರರು ರಾಜ್ಯದ ಅಭಿವೃದ್ಧಿಯನ್ನು ಗಮನಿಸಿ ಮತದಾನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅತ್ಯುತ್ತಮವಾಗಿ ಅನುಷ್ಠಾನಕ್ಕೆ ತರುತ್ತಿದೆ. ರಾಜ್ಯದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಪರ ಕಾರ್ಯವೈಖರಿಯನ್ನೂ ಜನರು ಗಮನಿಸಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶ ಸ್ಪಷ್ಟ ಉದಾಹರಣೆ ಎಂದು ಕಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಶಿರಾದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದೇವೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಅಭಿವೃದ್ಧಿ ಕಾರ್ಯವನ್ನು ಇಲ್ಲಿ ಕಡೆಗಣಿಸಿದ್ದವು. ಇನ್ನೊಂದೆಡೆ ಪಕ್ಷವು ಹೊಸ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸಂಘಟನೆ ಮೂಲಕ ಗೆಲುವು ಸಾಧಿಸಿದೆ. ಕರ್ನಾಟಕವನ್ನು ಕಲ್ಯಾಣ ಮಾಡುವ ಶಕ್ತಿ ಯಡಿಯೂರಪ್ಪ ಅವರಿಗಿದೆ. ಸಾಮೂಹಿಕ ಪ್ರಯತ್ನದ ಮೂಲಕ ನಮ್ಮ ಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಎನ್‌ಡಿಎ ಉತ್ತಮ ಫಲಿತಾಂಶ ಬರಲು ಹಾಗೂ ಮಧ್ಯಪ್ರದೇಶ, ಗುಜರಾತ್, ತೆಲಂಗಾಣ ಸೇರಿ ದೇಶದ ಇತರ ಕಡೆಗಳಲ್ಲಿ ಉಪ ಚುನಾವಣೆಯಲ್ಲೂ ಗೆಲುವಿಗೆ ಪ್ರಧಾನಿ ಮೋದಿ ಅಭಿವೃದ್ಧಿಯ ಸಾಧನೆಯೇ ಕಾರಣ. ಅವರಿಗೆ, ದೇಶದ ಗೃಹ ಸಚಿವರು ಮತ್ತು ಚಾಣಕ್ಯರಂತೆ ಬಿಂಬಿತರಾದ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರಿಕಾ ಹೇಳಿಕೆ ಮೂಲಕ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.