ETV Bharat / city

ಅಧಿಕಾರಕ್ಕಾಗಿ ಆಪರೇಷನ್ ಕಮಲ ಅನಿವಾರ್ಯವಾಗಿತ್ತು: ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​

ಆಪರೇಷನ್​ ಕಮಲ ಮಾಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಸಮರ್ಥಿಸಿಕೊಂಡಿದ್ದು, ಅಧಿಕಾರಕ್ಕಾಗಿ ಆಪರೇಷನ್​ ನಡೆಸುವುದು ಅನಿವಾರ್ಯವಾಗಿತ್ತು ಎಂದಿದ್ದಾರೆ.

nalin-kumar-kateel
ಕಟೀಲ್
author img

By

Published : May 8, 2022, 4:04 PM IST

ಬೆಂಗಳೂರು: ರಾಜಕೀಯ ಪಕ್ಷವಾಗಿ ಅಧಿಕಾರ ಹಿಡಿಯಲು ನಮಗೆ ಆಪರೇಷನ್ ಕಮಲ ಅನಿವಾರ್ಯವಾಗಿತ್ತು. ಅಧಿಕಾರಕ್ಕಾಗಿ ನಾವು ಆಪರೇಷನ್ ಕಮಲ ಮಾಡಿರಬಹುದು. ಆದರೆ, ಅಧಿಕಾರಕ್ಕೆ ಬಂದ ಮೇಲೆ ನಾವು ಏನು ಮಾಡಿದ್ದೇವೆ ಎನ್ನುವುದೇ ಮುಖ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಆಪರೇಷನ್ ಕಮಲವನ್ನು ಸಮರ್ಥಿಸಿಕೊಂಡಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಆಪರೇಷನ್ ಕಮಲ ಮಾಡಿದಾಗ ಬೇರೆ ಪಕ್ಷಗಳಿಂದ ಕರ್ಕೊಂಡ್ ಬರೋದೇನಾ ನಿಮ್ ಕೆಲಸ ಅಂತ ಬಹಳ ಜನ ಕೇಳಿದ್ದರು. ಆದರೆ, ಆಪರೇಷನ್ ಕಮಲ ಅನಿವಾರ್ಯ. ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ಇದು ಅನಿವಾರ್ಯ. ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿರಬಹುದು, ಆದರೆ ನಮ್ಮ ಪಕ್ಷದಲ್ಲಿ ಪಕ್ಷಕ್ಕಾಗಿ ದುಡಿದವರು. ಸಾಮಾನ್ಯ ಕಾರ್ಯಕರ್ತನನ್ನೂ ಶಾಸಕನನ್ನಾಗಿ ಮಾಡುತ್ತೇವೆ. ಕೆಳ ವರ್ಗದವರಿಗೆ ಅಧಿಕಾರ ನೀಡುತ್ತೇವೆ ಎಂದರು.

ಕಾಂಗ್ರೆಸ್​ನಲ್ಲಿ ಪದಾಧಿಕಾರಿಗಳ ತಂಡ ಸಾಂವಿಧಾನಿಕವಾಗಿಲ್ಲ. ಕಾಂಗ್ರೆಸ್​ನಲ್ಲಿ ಅವ್ಯವಸ್ಥೆ ತುಂಬಿದೆ. ಅವರಿಗೆ ಪಕ್ಷ ಕಟ್ಟಲು ಗೊತ್ತಿಲ್ಲ. ಇನ್ನು ನಾಡನ್ನು ಹೇಗೆ ಕಟ್ಟುತ್ತಾರೆ. ಕಾಂಗ್ರೆಸ್​ನಲ್ಲಿ 150 ಮಂದಿ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಅದು ಮುಂದೆ 250 ದಾಟುತ್ತದೆ ಎಂದು ಕಟೀಲ್​ ವ್ಯಂಗ್ಯವಾಡಿದರು.

ಹುಬ್ಬಳ್ಳಿ ದಾಂಧಲೆ ಹಿಂದೆ ಸಿದ್ದರಾಮಯ್ಯ: ಶಿವಮೊಗ್ಗದ ಗಲಭೆ, ಡಿ ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ. ಕಾಂಗ್ರೆಸ್​ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಬಿಟ್ಟರೆ ಉಳಿದ ಎಲ್ಲ ಪ್ರಧಾನಿಗಳೂ ಕಳಂಕಿತರು. ವಾಜಪೇಯಿ, ಮೋದಿ ಕಳಂಕರಹಿತ, ಭ್ರಷ್ಟಾಚಾರ ರಹಿತ ಸರ್ಕಾರ ಕೊಟ್ಟವರು. ರಾಜ್ಯದಲ್ಲೂ ಎಲ್ಲ ಕಾಂಗ್ರೆಸ್ ಸಿಎಂಗಳೂ ಭ್ರಷ್ಟಾಚಾರಿಗಳು. ಸಿದ್ದರಾಮಯ್ಯಗೆ ಹ್ಯೂಬ್ಲೋಟ್ ವಾಚ್ ಯಾರು ಕೊಟ್ರು? ಅರ್ಕಾವತಿ ರೀಡೂ ಪ್ರಕರಣದ ತನಿಖೆ ಆದರೆ ಸಿದ್ದರಾಮಯ್ಯ ಜೀವನಪರ್ಯಂತ ಜೈಲಿನಲ್ಲಿರ್ತಾರೆ. ಸಿದ್ದರಾಮಯ್ಯ ಅವರಷ್ಟು ಭ್ರಷ್ಟಾಚಾರಿ ಬೇರೆ ಯಾರೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಗಂಭೀರ ಆರೋಪ ಮಾಡಿದರು.

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ‌ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ತನಿಖೆಗೆ ಆದೇಶಿಸಿದೆ. ಇದು ಸಿಎಂ ಬೊಮ್ಮಾಯಿ ಅವರ ತಕ್ಷಣದ ನಡೆ. ಸರ್ಕಾರ ಪಾರದರ್ಶಕ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದ್ದರು. ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಮಾಡಿತು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ಓದಿ: ಪ್ರೇಯಸಿಯ ನಗ್ನಚಿತ್ರ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆ, ವ್ಯಕ್ತಿ ಬಂಧನ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.