ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಪರಿಸ್ಥಿತಿ ಈಗ ನೀನೇ ಸಾಕಿದಾ ಗಿಣಿ, ನಿನ್ನ ಮುದ್ದಿನಾ ಗಿಣಿ, ಹದ್ದಾಗಿ ಕುಕ್ಕಿತಲ್ಲೋ ಎಂಬಂತಾಗಿದೆ. ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿದ್ದಾರೆ. ಡಿಕೆಶಿ ಅವರೇ, ನೀವು ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣ ಒಡೆದ ಮನೆಯಾಗಿದೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ.ಪಾಟೀಲ್ ಹಾಗೂ ಅಶ್ವತ್ಥ ನಾರಾಯಣ ಭೇಟಿಯ ಬಗ್ಗೆ ಮಾತನಾಡಿದ ಡಿಕೆಶಿ, ಈಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ ಎಂದು ಬಿಜೆಪಿ ಟಾಂಗ್ ನೀಡಿದೆ.
ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಡಿಕೆಶಿ ಅವರೀಗ ಅಸಹಾಯಕರಾಗಿದ್ದಾರೆ. ಕೆಪಿಸಿಸಿ ಮನೆಯಲ್ಲಿ ಸಿದ್ದರಾಮಯ್ಯ ಅವರ ಹಾವಳಿ ಜಾಸ್ತಿಯಾಗಿದೆ ಎಂದು ಬಿಜೆಪಿ ಕುಟುಕಿದೆ.
ಡಿಕೆಶಿ ವಿರುದ್ಧ ನಟಿ ರಮ್ಯಾ ಕಳೆದ ಎರಡು ದಿನಗಳಿಂದ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ವಿರುದ್ಧ ನೇರವಾಗಿಯೇ ಟ್ವಿಟ್ ವಾರ್ಗಿಳಿದಿರುವುದು ಕಾಂಗ್ರೆಸ್ಗೆ ಮುಜುಗರ ಉಂಟಾಗಿದೆ.
ಇದನ್ನೂ ಓದಿ: ಡಿಕೆಶಿ ಹೇಳಿಕೆಗೆ ರಮ್ಯಾ ಭಿನ್ನರಾಗ; ಬಂಡೆಗೆ ಸೆಡ್ಡು ಹೊಡೆದ್ರಾ ಪದ್ಮಾವತಿ!?
-
ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು @DKShivakumar ಅಸಹಾಯಕರೇ?
— BJP Karnataka (@BJP4Karnataka) May 12, 2022 " class="align-text-top noRightClick twitterSection" data="
ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ?
ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ?#ಅಸಹಾಯಕಡಿಕೆಶಿ pic.twitter.com/6ED8iPlcm8
">ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು @DKShivakumar ಅಸಹಾಯಕರೇ?
— BJP Karnataka (@BJP4Karnataka) May 12, 2022
ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ?
ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ?#ಅಸಹಾಯಕಡಿಕೆಶಿ pic.twitter.com/6ED8iPlcm8ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು @DKShivakumar ಅಸಹಾಯಕರೇ?