ETV Bharat / city

ಕೇರಳದಲ್ಲಿ ಜನ ಬದಲಾವಣೆ ಬಯಸಿದ್ದಾರೆ, ಬಿಜೆಪಿಯತ್ತ ಒಲವಿದೆ : ಡಿಸಿಎಂ ಅಶ್ವತ್ಥ್​ ನಾರಾಯಣ್

author img

By

Published : Feb 28, 2021, 3:58 PM IST

ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ..

bjp will win in kerala legislative assembly election
ಡಿಸಿಎಂ ಅಶ್ವತ್ಥ್​ ನಾರಾಯಣ್

ಬೆಂಗಳೂರು : ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ, ಉಪ ಮುಖ್ಯಮಂತ್ರಿ ಡಾ. ಸಿ ಎನ್ ‌ಅಶ್ವತ್ಥ್ ನಾರಾಯಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ 70 ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದರು.

ಈಗಿನ ಎಲ್‌ಡಿಎಫ್‌ ಸರ್ಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದ ಡಿಸಿಎಂ, ಈ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ ಎಂದು ಟೀಕಿಸಿದರು.

ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ ಎಂದು ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

ಬಿಜೆಪಿ ಬಗ್ಗೆ ಕೇರಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅನೇಕ ಪಕ್ಷಗಳಿಗೆ ಅಲ್ಲಿ ನಾಯಕತ್ವವೇ ಇಲ್ಲ. ಆ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಇದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.