ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಕಮಿಷನ್ ದಂಧೆ ಹೆಚ್ಚಾಗುತ್ತಿದೆ. ಈಗಾಗಲೇ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಮೋದಿಗೆ ಮತ್ತು ಸಿಎಂಗೆ ದೂರು ನೀಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿದೆ. ಈಗಾಗಲೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಮತ್ತು ಸಿಎಂಗೆ ದೂರು ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಕೇಳುತ್ತಿದೆ ಎಂದು ದೂರು ನೀಡಲಾಗಿದೆ.
ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆ ಪ್ರಮುಖ ನಾಯಕರು ಗ್ರಾಮೀಣ ಅಭಿವೃದ್ಧಿ ಸಚಿವ ಶೇ.40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ ಎಂದರು. ಈಗಾಗಲೇ ಶೇ.40ರಷ್ಟು ಸರ್ಕಾರದ ಬಗ್ಗೆ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ದಿನದಿಂದ ದಿನಕ್ಕೆ ಕಮಿಷನ್ ಆರೋಪ ಹೆಚ್ಚಾಗುತ್ತಿದೆ.
ಆದ್ರೆ, ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಇದೀಗ ಅವರ ಪಕ್ಷದಿಂದಲೇ ಆರೋಪ ಕೇಳಿ ಬಂದಿದೆ. ಹಾಗಾಗಿ, ಈಶ್ವರಪ್ಪ ತಕ್ಷಣ ರಾಜೀನಾಮೆ ಕೊಟ್ಟು, ಆರೋಪದಿಂದ ಮುಕ್ತರಾಗುವವರೆಗೂ ಮಂತ್ರಿ ಮಂಡಲದಲ್ಲಿ ಇರಬಾರದು ಎಂದು ಒತ್ತಾಯ ಮಾಡ್ತೇನೆ ಎಂದರು.
ಇದನ್ನೂ ಓದಿ: ಎರಡಕ್ಕೂ ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ಸರ್ಕಾರಿ ಸವಲತ್ತು ಬೇಡ : ಭಾರತಿಶೆಟ್ಟಿ ಪ್ರಸ್ತಾಪ