ETV Bharat / city

ಅಬ್ದುಲ್ ನಜೀರ್ ಸಾಬ್ ರೀತಿ ಕೆಲಸ ಮಾಡಬೇಕು..ಕೆಲಸಗಳೇ ನಮ್ಮ ಗುರುತಾಗಬೇಕು: ಬಿ.ಎಲ್ ಸಂತೋಷ್ ಕರೆ

ಕಾಂಗ್ರೆಸ್ ನಮ್ಮ ಯೋಚನಾ ಶಕ್ತಿಯನ್ನೇ ಹಾಳು ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪಕ್ಷಪಾತ ಎಲ್ಲರಿಗೂ ತಿಳಿದಿದೆ. ಅದು ಚುನಾಯಿತ ಪ್ರತಿನಿಧಿಗಳ ಯೋಚನಾ ಶಕ್ತಿಯನ್ನೇ ಹಾಳು ಮಾಡಿ, ಅವರ ದಿಕ್ಸೂಚಿಯನ್ನೇ ಬದಲಾಯಿಸಿದ್ದು, ದುರಂತ ಎಂದು ಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ದೂರಿದರು.

ಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಉದ್ಘಾಟನೆ
ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಉದ್ಘಾಟನೆ
author img

By

Published : Oct 25, 2021, 8:02 PM IST

ಬೆಂಗಳೂರು: ಕೇವಲ ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗುವುದಿಲ್ಲ. ಅದನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆ ತರಬೇಕು. ಆಗ ಗೌರವ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. 30 ವರ್ಷಗಳು ಕಳೆದರೂ ಅಬ್ದುಲ್ ನಜೀರ್ ಸಾಬ್ ಅಥವಾ ನೀರ್ ಸಾಬ್ ಯಾರಿಗೆ ಗೊತ್ತಿಲ್ಲ ಹೇಳಿ?. ಹಾಗೆ ನಮ್ಮ ಕೆಲಸ ನಮ್ಮ ಗುರುತು ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.

ಗ್ರಾ.ಪಂ ವಿಧಾನ ಪರಿಷತ್, ವಿಧಾನಸಭೆಗೆ ಹೆಬ್ಬಾಗಿಲಿದ್ದಂತೆ

ಯಲಹಂಕದ ಸಿಂಗನಾಯಕನ ಹಳ್ಳಿಯಲ್ಲಿ ಇಂದು ನಡೆದ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರು ಬಹುತೇಕ ನಿರ್ಣಾಯಕ ಮತ್ತು ಸ್ಥಳೀಯ ಶಕ್ತಿ. ಗ್ರಾಮ ಪಂಚಾಯಿತಿ ವಿಧಾನ ಪರಿಷತ್, ವಿಧಾನಸಭೆಗೆ ಹೆಬ್ಬಾಗಿಲು ಇದ್ದಂತೆ. ವಿಧಾನ ಪರಿಷತ್ ಪ್ರವೇಶಿಸಲು ಇಚ್ಛೆ ಇರುವವರೇ ಹೆಚ್ಚಾಗಿ ಗ್ರಾಮ ಪಂಚಾಯಿತಿಗಳನ್ನು ಪ್ರವೇಶಿಸುತ್ತಿದ್ದಾರೆ. ಎಲ್ಲ ಪಕ್ಷಗಳಲ್ಲೂ ಇಂತಹವರಿದ್ದಾರೆ. ಕೇವಲ ನಮ್ಮ ಪಕ್ಷದಲ್ಲಿ ಅಲ್ಲ ಎಂದರು.

ಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಉದ್ಘಾಟನೆ
ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಉದ್ಘಾಟನೆ

ದೇಶದಲ್ಲಿ ಚೆಕ್​ಗೆ ಸಹಿ ಮಾಡುವ ಅಧಿಕಾರವನ್ನು ಕೇವಲ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾತ್ರ ನೀಡಲಾಗಿದೆ. ಬೇರೆ ಯಾವ ಜನಪ್ರತಿನಿಧಿಗಳಿಗೆ ಇಲ್ಲ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ನಮ್ಮ ಯೋಚನಾ ಶಕ್ತಿಯನ್ನೇ ಹಾಳು ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪಕ್ಷಪಾತ ಎಲ್ಲರಿಗೂ ತಿಳಿದಿದೆ. ಅದು ಚುನಾಯಿತ ಪ್ರತಿನಿಧಿಗಳ ಯೋಚನಾ ಶಕ್ತಿಯನ್ನೇ ಹಾಳು ಮಾಡಿ, ಅವರ ದಿಕ್ಸೂಚಿಯನ್ನೇ ಬದಲಾಯಿಸಿದ್ದು, ದುರಂತ ಎಂದು ದೂರಿದರು.

ಹತ್ತಿರದಿಂದ ಸಮಸ್ಯೆ ನೋಡಲು ಅವಕಾಶ

ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅನ್ನೋದು ಯಾವ ದೆಹಲಿ ನಾಯಕರಿಗೂ ಇಲ್ಲ. ಅಧಿಕಾರ ಇರುವುದು ಸೇವೆ ಮಾಡಲು. ಒಂದು ಮೈಕ್ ಮೂಲಕ ನೀರು ಬರುವುದನ್ನು ಜನರಿಗೆ ತಿಳಿಸಬಹುದು. ಜನ ಸಾಮಾನ್ಯರ ಸಮಸ್ಯೆಗಳನ್ನು ಹತ್ತಿರದಿಂದ ನೋಡಲು ಅವಕಾಶ ಸಿಗುತ್ತದೆ. ಅದನ್ನು ಸದುಪಯೋಗ ಪಡಿಸಿಕೊಂಡು ಜನರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಲು ಉತ್ತಮ ವೇದಿಕೆ ಆಗಲಿದೆ. ಅದನ್ನ ಒಳ್ಳೆಯದಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.

ಗಾಂಧಿಯವರ ಗ್ರಾಮ ಸ್ವರಾಜ್ಯ ಚಿಂತನೆಯನ್ನು ಪಂಡಿತ್ ದೀನ್​ದಯಾಳ್ ಅಂತ್ಯೋದಯ ಎಂದರು. ಸರ್ವೋದಯ ಎಂದರೂ ಅದೇ ಆಗಿದೆ. ಗ್ರಾಮ ಪಂಚಾಯಿತಿಗಳು ಉತ್ತಮ ಗುಣಮಟ್ಟ ನೀಡಿ ಸಮಾಜದ ಮುಖ್ಯವಾಹಿನಿಗೆ ಜನರನ್ನು ತರುವುದೇ ಎಲ್ಲರ ಉದ್ದೇಶ ಎಂದು ವಿವರಿಸಿದರು.

ಸ್ಥಳೀಯ ಉತ್ಪಾದನೆಗೆ ಉತ್ತೇಜನ

ಗ್ರಾಮ ಪಂಚಾಯಿತಿಗಳಲ್ಲಿ ಹೈನುಗಾರಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆಗೆ ಉತ್ತೇಜನ ಕೊಡಬೇಕು. ಸ್ಥಳೀಯ ಉತ್ಪಾದನೆ, ಸ್ಥಳೀಯ ಉತ್ತೇಜನಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಸ್ವಯಂ ಪ್ರೇರಿತ ನಿರ್ಧಾರಗಳು ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲರಿಗೂ ಸರ್ಕಾರಿ ಕೆಲಸ ಬೇಕು, ಆದರೆ ಯಾರೂ ಹಳ್ಳಿಗಳಲ್ಲಿ ಕೆಲಸ ಮಾಡಲಿಕ್ಕೆ ಇಷ್ಟ ಇಲ್ಲ. ಜನರು ನಗರ ಪ್ರದೇಶಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹಳ್ಳಿಗಳಲ್ಲಿ ಶಿಕ್ಷಕರು ಇಲ್ಲದೇ ಸೊರಗಿ ಹೋಗುತ್ತಿವೆ. ಹಳ್ಳಿಗಳಿಗೆ ಹೆಚ್ಚಿನ ಸೌಕರ್ಯ ಕೊಟ್ಟಾಗ ಜನರು ನಗರಗಳತ್ತ ಬರುವುದು ಕಡಿಮೆಯಾಗುತ್ತದೆ ಎಂದರು.

ಮತದಾರರಿಗೆ ಸುಲಭವಾಗಿ ತಲುಪಬಹುದಾದ ಏಕೈಕ ವೇದಿಕೆ

ನಿಮಗಿಂತ ಮೊದಲು ಗ್ರಾಮ ಪಂಚಾಯಿತಿ ಇತ್ತು. ಆಗಲೂ ಕಾಮಗಾರಿ ಆಗಿವೆ. ಸ್ವಾತಂತ್ರ್ಯ ಬಂದಾಗಿಂದ ಕಾಮಗಾರಿಗಳು ಆಗಿವೆ. ಆದರೂ ಇನ್ನೂ ಕೊಳಗೇರಿ, ಹಿಂದುಳಿದ ಗ್ರಾಮಗಳಿವೆ. ನಮ್ಮ ಕೆಲಸಗಳಿಂದ ನಮ್ಮನ್ನು ಗುರುತಿಸುವಂತೆ ಆಗಬೇಕಿತ್ತು. ಗ್ರಾಮ ಪಂಚಾಯಿತಿಗಳು ದೇಶದ ಅಭಿವೃದ್ಧಿಗೆ ದಾರಿ ದೀಪ. ಮತದಾರರಿಗೆ ಸುಲಭವಾಗಿ ತಲುಪಬಹುದಾದ ಏಕೈಕ ವೇದಿಕೆ. ಜನರಿಗೆ ಒಳ್ಳೆಯದನ್ನು ಮಾಡುವ ಜವಾಬ್ದಾರಿ ಜನರಿಂದ ಆಯ್ಕೆಯಾದ ನಮ್ಮ ಮೇಲೆ ಇದೆ.

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ಆರ್ಥಿಕ, ಸಾಮಾಜಿಕ, ಭೌತಿಕ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಗ್ರಾಮದ ಸಾಕ್ಷರತೆ, ಆರ್ಥಿಕ ಬೆಳವಣಿಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.