ETV Bharat / city

Black Fungus: ಆಸ್ಪತ್ರೆಗಳಿಗೆ ಐಸಿಎಂಆರ್ ಮಾರ್ಗಸೂಚಿ ತಲುಪಿಸಲು ಹೈಕೋರ್ಟ್ ಆದೇಶ

ಬ್ಲ್ಯಾಕ್‌ ಫಂಗಸ್‌ ಸಂಬಂಧ ಜೂನ್ 9ರಂದು ಐಸಿಎಂಆರ್‌ ಹೊರಡಿಸಿರುವ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ತಲುಪಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

Black fungus; ICMR guidelines should be preached to all hospitals; Karnataka high court
ಬ್ಲಾಕ್ ಫಂಗಸ್; ಆಸ್ಪತ್ರೆಗಳಿಗೆ ಐಸಿಎಂಆರ್ ಮಾರ್ಗಸೂಚಿ ತಲುಪಿಸಲು ಹೈಕೋರ್ಟ್ ಆದೇಶ
author img

By

Published : Jun 10, 2021, 8:34 PM IST

Updated : Jun 10, 2021, 8:50 PM IST

ಬೆಂಗಳೂರು: ಭಾರತೀಯ ವೈದ್ಯಕಿಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಬ್ಲ್ಯಾಕ್ ಫಂಗಸ್ ಸೋಂಕು ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಜೂನ್ 9ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ತಲುಪಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 1,947 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 157 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರ 22,050 ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಈವರೆಗೆ 19,950 ಡೋಸ್‌ಗಳನ್ನು ತಲುಪಿಸಿದೆ. ಪ್ರತಿ ಸೋಂಕಿತರಿಗೆ 6 ರಿಂದ 8 ವಾರಗಳಲ್ಲಿ 30 ವಯಲ್ಸ್ ನೀಡುವುದು ಅಗತ್ಯವಿದೆ. ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಜೂನ್ 9ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ ಎಂದರು.

ಇದನ್ನೂ ಓದಿ: ಅನ್ ಲಾಕ್ ಭವಿಷ್ಯ ನಿರ್ಧರಿಸಲು ಸಿಎಂ ನೇತೃತ್ವದಲ್ಲಿ ಸಭೆ

ಕೇಂದ್ರ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ಬ್ಲ್ಯಾಕ್ ಫಂಗಸ್‌ಗೆ ಔಷಧ ಪಡೆಯಲು ಕೇಂದ್ರ ಸರ್ಕಾರ ಜಗತ್ತಿನ ವಿವಿಧ ದೇಶಗಳನ್ನು ಸಂಪಕಿರ್ಸಿದೆ. ತಜ್ಞರೊಂದಿಗೆ ಸಮಾಲೋಚನೆ ನಡೆಸಿದೆ. ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಚುಚ್ಚುಮದ್ದು ಸಹ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಹೇಳಿಕೆ ಪರಿಗಣಿಸಿದ ಪೀಠ, ಐಸಿಎಂಆರ್ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ತಲುಪಿಸಬೇಕು. ರಾಜ್ಯ ಸರ್ಕಾರ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸುವಂತೆ ಕೇಂದ್ರಕ್ಕೆ ನಿಯಮಿತವಾಗಿ ಬೇಡಿಕೆ ಸಲ್ಲಿಸಬೇಕು. ಅದರಂತೆ ಕೇಂದ್ರ ಸರ್ಕಾರ ಔಷಧ ಮತ್ತು ಚುಚ್ಚುಮದ್ದು ಪೂರೈಸಬೇಕು. ಮುಂದಿನ ವಿಚಾರಣೆ ಸಂದರ್ಭದಲ್ಲಿ ರಾಜ್ಯದಲ್ಲಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಅಂಕಿ ಅಂಶಗಳ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

Last Updated : Jun 10, 2021, 8:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.