ಬೆಂಗಳೂರು : ಗಾಂಧಿ ಭವನದಲ್ಲಿ ಕಿಡಿಗೇಡಿಗಳು ಪತ್ರಕರ್ತರ ಸೋಗಿನಲ್ಲಿ ಪತ್ರಿಕಾಗೋಷ್ಠಿ ಸಮಯದಲ್ಲಿ ಗೂಂಡಾ ವರ್ತನೆ ತೋರಿ ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆಗೆ ಯತ್ನ ಮಾಡಿರುವುದು ಖಂಡನೀಯ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ರಾಜ್ಯ ರೈತ ಮುಖಂಡನ ಸ್ಟಿಂಗ್ ಆಪರೇಷನ್ ಡೀಲ್ ಬಗ್ಗೆ ಹಾಗೂ ರಾಷ್ಟ್ರೀಯ ರೈತ ಮುಖಂಡರ ಬಗ್ಗೆ ಸುದ್ದಿವಾಹಿನಿ ಬಿತ್ತರಿಸಿರುವ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರುವಾಗ ರಾಷ್ಟ್ರೀಯ ರೈತ ಮುಖಂಡ ಹಾಗೂ ಮತ್ತಿತರರ ಮೇಲೆ ಕಪ್ಪು ಮಸಿ ಎರಚಿ ಹಲ್ಲೆಗೆ ಯತ್ನಿಸಿರುವುದು ರೈತ ಸಮುದಾಯಕ್ಕೆ ಮಾಡಿದ ಅಪಮಾನ, ಇದು ರಾಜಕೀಯ ಪಿತೂರಿಯಾಗಿದೆ.
ಈ ಪ್ರಕರಣದ ಗಂಭೀರತೆಯನ್ನು ಅರಿತು ತಕ್ಷಣವೇ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಕಾಣದ ಕೈಗಳ ರಾಜಕೀಯ ಪಿತೂರಿಯಿಂದ ಆಗಿರುವ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ. ಕೂಡಲೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ರಾಜ್ಯಾದ್ಯಂತ ರೈತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿಲ್ಲಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ರೈತ ಮುಖಂಡರ ಮೇಲೆ ಮಸಿ ಬಳಿದ ಪ್ರಕರಣ : ಮೂವರನ್ನು ವಶಕ್ಕೆ ಪಡೆದ ಪೊಲೀಸರು