ETV Bharat / city

ವೀಕೆಂಡ್ ಕರ್ಫ್ಯೂ: ಅಗತ್ಯ ಸೇವೆಗಳಿಗಷ್ಟೇ ಬಿಎಂಟಿಸಿ ಬಸ್ಗಳ ಓಡಾಟ

ವೀಕೆಂಡ್ ಲಾಕ್ಡೌನ್ ಹಿನ್ನೆಲೆ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ, ಅನುಮತಿಸಲಾದ ಚಟುವಟಿಕೆಗಳಿಗೆ ಅಗತ್ಯ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ನಿಷೇಧಿವಲ್ಲದ ಕೈಗಾರಿಕೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯ ಅನುಕೂಲಕ್ಕಾಗಿ 450-500 ಅಗತ್ಯ ಸಾಮಾನ್ಯ ಸಾರಿಗೆ ಸೇವೆಗಳ ಸೌಲಭ್ಯ ಒದಗಿಸಲಾಗುತ್ತದೆ

BMTC buses for essential services at weekend curfew time

author img

By

Published : Apr 23, 2021, 5:53 PM IST

Updated : Apr 23, 2021, 6:06 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ನಾಳೆ ಹಾಗೂ ನಾಡಿದ್ದು ಬಿಎಂಟಿಸಿ ಬಸ್​ಗಳ ಓಡಾಟ ಇದ್ದರೂ ಸಹ ಸಾರ್ವಜನಿಕರಿಗೆ ಸಂಚಾರಿಸಲು ಅವಕಾಶ ಇರುವುದಿಲ್ಲ.

ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ, ಅನುಮತಿಸಲಾದ ಚಟುವಟಿಕೆಗಳಿಗೆ ಅಗತ್ಯ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ನಿಷೇಧಿವಲ್ಲದ ಕೈಗಾರಿಕೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯ ಅನುಕೂಲಕ್ಕಾಗಿ 450 -500 ಅಗತ್ಯ ಸಾಮಾನ್ಯ ಸಾರಿಗೆ ಸೇವೆಗಳ ಸೌಲಭ್ಯ ಒದಗಿಸಲಾಗುತ್ತದೆ.

ವಿಮಾನಯಾನ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ, 48 ವಾಯುವಜ್ರ ಸೇವೆಗಳನ್ನು ಸಹ ಕಾರ್ಯಾಚರಣೆ ಮಾಡಲಾಗುತ್ತಿದೆ. ಇನ್ನು ಎಲ್ಲ ಮಾದರಿಯ ಬಸ್​​​​ಗಳಲ್ಲಿ ಒಟ್ಟು ಆಸನಗಳ ಸಾಮರ್ಥ್ಯ ದ ಶೇ. 50 ರಷ್ಟು ಪ್ರಯಾಣಿರನ್ನು ಮಾತ್ರ ಪ್ರಯಾಣಿಸಲು ಅನುಮತಿಸಲಾಗಿದೆ.

ಪ್ರಯಾಣಿಕರ ದಟ್ಟಣನೆಗೆ ಅನುಗುಣವಾಗಿ ಕೆಎಸ್ ಆರ್ ಟಿಸಿ ಓಡಾಟ

ಕೆಎಸ್ ಆರ್ ಟಿಸಿ ನಿಗಮದ ಬಸ್​​​​ಗಳು ಕಾರ್ಯಾಚರಣೆ ‌ಇರಲಿದ್ದು, ಪ್ರಯಾಣಿಕರ ಸಂಖ್ಯೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಓಡಿಸಲಾಗುತ್ತೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Last Updated : Apr 23, 2021, 6:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.