ದೇವನಹಳ್ಳಿ: ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಪ್ರಯಾಣಿಕ ನಿಂದಿಸಿದ ಅನ್ನೋ ಕಾರಣಕ್ಕೆ ಬಿಎಂಟಿಸಿ ಸಿಬ್ಬಂದಿ ಆತನ ಮೇಲೆ ಗೂಂಡಾ ವರ್ತನೆ ತೋರಿಸಿ ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಈ ಹಲ್ಲೆ ವಿಡಿಯೋ ವೈರಲ್ ಆಗಿದೆ.
ದೇವನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಘಟನೆ ನಡೆದಿದ್ದು, ಪ್ರಯಾಣಿಕ ಕುಡಿದ ಮತ್ತಿನಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ನಿಂದಿಸಿದ ಅನ್ನೋ ಕಾರಣಕ್ಕೆ ಪ್ರಯಾಣಿಕನ ಮೇಲೆ ಮುಗಿ ಬಿದ್ದ ಬಿಎಂಟಿಸಿ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ.
ಹೊಡೆತದಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದಾಗ ಆತನನ್ನು ಹಿಡಿದು ಮತ್ತೆ ಹೊಡೆದಿದ್ದಾರೆ. ಪ್ರಯಾಣಿಕನ ಮೇಲೆ ಬಿಎಂಟಿಸಿ ಸಿಬ್ಬಂದಿ ತೋರಿದ ಗೂಂಡಾ ವರ್ತನೆ ಸಾರ್ವಜನಿಕರ ಅಕ್ರೋಶಕ್ಕೆ ಗುರಿಯಾಗಿದೆ.
ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಕ್ರಮ ತೆಗೆದು ಕೊಳ್ಳುವುದಾಗಿ ಹೇಳಿದ್ದಾರೆ.