ಬೆಂಗಳೂರು : ಕುಟುಂಬ ಸಮೇತರಾಗಿ ದುಬೈ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.
ಡಿ.24ರಂದು ದುಬೈ ಪ್ರವಾಸಕ್ಕೆ ತೆರಳಿದ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಬೆಳಗಾವಿ ಅಧಿವೇಶನ ಮುಗಿದ ಬಳಿಕ ಯಡಿಯೂರಪ್ಪ ಹಾಗೂ ಅವರ ಕುಟುಂಬ ದುಬೈಗೆ ತೆರಳಿತ್ತು.
ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮತ್ತು ಮೊಮ್ಮಕ್ಕಳ ಜೊತೆ ಮಾಜಿ ಸಿಎಂ ಬಿಎಸ್ವೈ ಪ್ರವಾಸ ಕೈಗೊಂಡು ಸದ್ಯ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ನಾಳೆ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ: ಏರ್ಪೋರ್ಟ್ನಿಂದ ವರ್ಚುವಲ್ ಮೂಲಕವೇ ಬಿಜೆಪಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿ!