ETV Bharat / city

ಬಿಎಸ್​ವೈ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ: ಸಿಎಂ ಬೊಮ್ಮಾಯಿ - cm bommai on Yadiyurappa

ಬಿಎಸ್​ವೈ ಅಧಿಕೃತ ನಿವಾಸ ಕಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಕೋರಿದರು‌.

BS Yadiyurappa bithday celebration in Kaveri Residence
ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬ
author img

By

Published : Feb 27, 2022, 1:31 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗು ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನದಲ್ಲೇ ನಾವೆಲ್ಲಾ ಮುಂದುವರೆಯಲಿದ್ದೇವೆ. ಅವರ ಮಾರ್ಗದರ್ಶನದಲ್ಲೇ ಮುಂದಿನ ಚುನಾವಣೆ ಎದುರಿಸಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಎಸ್​ವೈ ಅಧಿಕೃತ ನಿವಾಸ ಕಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದರು‌. ಪಂಚಮಸಾಲಿ ಜಗದ್ಗುರು ವಚನಾನಂದ ಶ್ರೀ, ಸಚಿವ ನಿರಾಣಿ ಸಿಎಂಗೆ ಸಾಥ್‌ ನೀಡಿದರು. ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿ ಶುಭಕೋರಿದರು.

ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪನವರು ಹೋರಾಟದಿಂದ, ಕಷ್ಟದಿಂದ ಮೇಲೆ ಬಂದವರು. ರೈತರ, ಬಡವರ ಪರ ಇರುವವರು. ಅವರ ಜೊತೆ ಇಡೀ ಕನ್ನಡಿಗರು ಇದ್ದಾರೆ. ಏಕಾಂಗಿಯಾಗಿ ಹೋರಾಟ ಆರಂಭಿಸಿ ಇಡೀ ಕರ್ನಾಟಕಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದರು.

ಮಾತಿಗೆ ತಪ್ಪದ ವ್ಯಕ್ತಿ ಎಂದು ಯಾರಾದರು ಇದ್ದರೆ ಅದು ಯಡಿಯೂರಪ್ಪನವರು. ಸಿಎಂ ಆಗಿದ್ದಾಗ ಅನೇಕ ಜನಪರ ಕೆಲಸ ಮಾಡಿದ್ದಾರೆ. ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಉಚಿತ ವಿದ್ಯುತ್ ನೀಡಿ ರೈತಪರ ಕೆಲಸ ಮಾಡಿದವರು. ನೀರಾವರಿ ಯೋಜನೆಗಳು, ಸಂಧ್ಯಾ ಸುರಕ್ಷಾ ಯೋಜನೆ ಕೊಟ್ಟಿದ್ದಾರೆ. ಅವರ ಆಶೀರ್ವಾದದಿಂದ ನಾವೆಲ್ಲ ಮುನ್ನಡೆಯುತ್ತೇವೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ರೈತ ನಾಯಕ, ಸಂಘಟನೆಗೆ ಶಕ್ತಿ ತುಂಬಿದ ನಾಯಕರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅವರಿಗೆ ಆರೋಗ್ಯ ಹಾಗೂ ನಾಡ ನಡೆಸುವ ಶಕ್ತಿಯನ್ನು ಆ ದೇವರು ಕೊಡಬೇಕು. 4 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹೋರಾಟ, ರೈತರ ಏಳಿಗೆಗೆ ಕೆಲಸ ಮಾಡಿದವರು ಅವರು. ಹೀಗಾಗಿ ಇಂದು ಜನರು ಬಂದು ಹರಸುತ್ತಿದ್ದಾರೆ ಎಂದರು.

ಶಿವಮೊಗ್ಗ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳನ್ನು ಕೊಟ್ಟಿರುವುದು ಸೇರಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಶಿಕಾರಿಪುರದಲ್ಲಿ ಮಾರ್ಚ್ 5ರಂದು ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಚಿವರುಗಳು ಭಾಗಿಯಾಗುತ್ತಾರೆ ಎಂದು ತಿಳಿಸಿದರು‌.

ಇದನ್ನೂ ಓದಿ: ಬೃಹತ್ ಗಾತ್ರದ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಇನ್ನೂ ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಸರ್ವಜನಾಂಗದ ಶಾಂತಿಯ ತೋಟವಾದ ಶಿವಮೊಗ್ಗ ಈಗ ಸಹಜ ಸ್ಥಿತಿಯತ್ತ ಬರುತ್ತಿದೆ. ಹಿಂದೂ ಪರ ಮಾತನಾಡಿ, ಧರ್ಮದ ಪರ ಧ್ವನಿ ಎತ್ತಿದವರ ಕಗ್ಗೊಲೆಗಳು ನಡೆಯುತ್ತಿದೆ. ಮುಂದೆ ಈ ರೀತಿಯಾಗದಂತೆ ಎಚ್ಚೆತ್ತುಕೊಳ್ಳುತ್ತೇವೆ. ಸದ್ಯ ಬಂಧಿತರಾಗಿರುವ ಆರೋಪಿಗಳ ಮೇಲೆ 6-8 ಕೇಸ್​ಗಳಿವೆ. ಬೇಲ್ ಮೇಲೆ ಹೊರಗೆ ಬಂದು ಮತ್ತೆ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.