ETV Bharat / city

ಮುಖ್ಯಮಂತ್ರಿಯಾಗಿ ಬಿಎಸ್​ವೈ ಮುಂದುವರೆಯಲಿದ್ದಾರೆ: ಅರುಣ್ ಸಿಂಗ್ ಸ್ಪಷ್ಟನೆ - ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ

ಸಿಎಂ ಬಿ. ಎಸ್​. ಯಡಿಯೂರಪ್ಪನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಂಪುಟದ ಎಲ್ಲಾ ಸಚಿವರು ಅವರಿಗೆ ಸಾಥ್​ ನೀಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಸಂಬಂಧ ಯಾವುದೇ ಚರ್ಚೆ ಹೈಕಮಾಂಡ್​ನಲ್ಲಿ ನಡೆದಿಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​​​ ಸಿಎಂ ಬದಲಾವಣೆ ಕುರಿತು ಸ್ಪಷ್ಟತೆ ನೀಡಿದರು.

bs-yadiyurappa-will-continue-as-cm
ಅರುಣ್ ಸಿಂಗ್
author img

By

Published : Jun 10, 2021, 5:29 PM IST

ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಸಿಎಂ ಬದಲಾವಣೆ ಕುರಿತು ಅರುಣ್ ಸಿಂಗ್ ಸ್ಪಷ್ಟನೆ

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್.​ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿಯೂ ಅವರು ಚೆನ್ನಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಸಂಪುಟದ ಎಲ್ಲಾ ಸಚಿವರು ಅವರಿಗೆ ಸಾಥ್​ ನೀಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಸಂಬಂಧ ಯಾವುದೇ ಚರ್ಚೆ ಹೈಕಮಾಂಡ್​ನಲ್ಲಿ ನಡೆದಿಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು.

ಕೆಲ ಶಾಸಕರು ಸಹಿ ಸಂಗ್ರಹ ಮಾಡುತ್ತಿರುವುದು, ಪರ, ವಿರೋಧ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದ್ದೇನೆ. ಸದ್ಯದಲ್ಲೇ ಬೆಂಗಳೂರಿಗೆ ತೆರಳಲಿದ್ದೇವೆ. ಶಾಸಕರ ಜೊತೆ ಮಾತುಕತೆ ನಡೆಸಿ ಎಲ್ಲರ ಅಭಿಪ್ರಾಯ ಪಡೆದು ಸಮಸ್ಯೆ ಪರಿಹರಿಸಲಾಗುತ್ತದೆ ಎಂದರು.

ಪಕ್ಷದ ನಾಯಕತ್ವದ ಮೇಲೆ ಎಲ್ಲರಿಗೂ ನಂಬಿಕೆ ಭರವಸೆ ಇದೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದ ಕೇಂದ್ರದ ನಾಯಕತ್ವ ರಾಜ್ಯದ ನಾಯಕತ್ವಕ್ಕೆ ಮಾರ್ಗದರ್ಶನ ನೀಡಲಿದೆ. ಯಾವುದೇ ಸಮಸ್ಯೆ ಇಲ್ಲ, ಯಡಿಯೂರಪ್ಪ ರಾಜೀನಾಮೆಯಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.