ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಕೇಶುಭಾಯ್ ಪಟೇಲ್ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದಿದ್ದಾರೆ.
ಓಂ ಶಾಂತಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.