ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನೇರವೇರಿಸಿದರು.
ಸರ್ಕಾರಿ ನಿವಾಸ ಕಾವೇರಿಯಲ್ಲಿ ಬಿಎಸ್ವೈ ಬೆಳಗ್ಗೆ 7.15 ಕ್ಕೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಿದರು.
![ಧ್ವಜಾರೋಹಣ ನೇರವೇರಿಸಿದ ಬಿ.ಎಸ್.ಯಡಿಯೂರಪ್ಪ](https://etvbharatimages.akamaized.net/etvbharat/prod-images/img-20210815-wa0003_1508newsroom_1628997100_780.jpg)
ಬಿಜೆಪಿ ಕಚೇರಿ, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವ ಸಂಭ್ರಮಾಚರಣೆಗೂ ಮುನ್ನ ತಮ್ಮ ನಿವಾಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ಮಾಜಿ ಸಿಎಂ, ಮಾಧ್ಯಮಗಳ ಮೂಲಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದಾರೆ.
ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಪಥಸಂಚಲನ ಹಾಗೂ ರಾಜ್ಯ ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.