ಬೆಂಗಳೂರು: ರಾಜಕೀಯ ಒತ್ತಡದಿಂದ ಮುಕ್ತರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸದ್ಯ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಿ ಬಾಸ್ಕೆಟ್ ಬಾಲ್ ಪಂದ್ಯಾವಳಿ ವೀಕ್ಷಣೆ ಮಾಡಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದುಬೈ ಪ್ರವಾಸ, ಯೂರೋಪ್ ಪ್ರವಾಸ ಮುಗಿಸಿ ವಾಪಸಾಗಿದ್ದು, ಬಿಡುವಿಲ್ಲದ ರಾಜಕೀಯ ಒತ್ತಡದಲ್ಲಿ ದಣಿದು ಇದೀಗ ವಿರಮಿಸುತ್ತಿದ್ದಾರೆ.
ಹಾಗಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಒತ್ತಡದಿಂದ ಮುಕ್ತರಾಗಿ ನಿರಾಳರಾಗಿ ಕಾಲ ಕಳೆಯುತ್ತಿದ್ದಾರೆ. ಇಂದು ಬೆಳಗ್ಗೆ ವಿಧಾನಸೌಧಕ್ಕೆ ತೆರಳಿ ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಜೆ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ ಬಾಲ್ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಬಾಸ್ಕೆಟ್ ಬಾಲ್ ಪಂದ್ಯಾವಳಿಯನ್ನು ವೀಕ್ಷಿಸಿದರು.
ಇದನ್ನೂ ಓದಿ : ಜಿಎಸ್ಟಿ ಏರಿಕೆ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ : ಹೆಚ್ಡಿಕೆ ವಾಗ್ದಾಳಿ