ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ್ದಾರೆ.
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊಮ್ಮಗಳ ಅಸಹಜ ಸಾವಿನಿಂದ ಬಿಎಸ್‌ವೈ ಮತ್ತು ಕುಟುಂಬ ದುಃಖದಲ್ಲಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಮತ್ತವರ ಕುಟುಂಬ ವರ್ಗಕ್ಕೆ ರಾಜ್ಯಪಾಲರು ಇಂದು ಸಾಂತ್ವನ ಹೇಳಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆನಂದ್ ಸಿಂಗ್, ಸಂಸದ ರಾಘವೇಂದ್ರ ಕೂಡ ಉಪಸ್ಥಿತರಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ